ಗೋಕಾಕ (ಬೆಳಗಾವಿ ಜಿಲ್ಲೆ): ಶಾಸಕ ರಮೇಶ ಜಾರಕಿಹೊಳಿ ಅವರು ತಾಲ್ಲೂಕಿನ ಅಂಕಲಗಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶನಿವಾರ ಚಾಲನೆ ನೀಡಿದರು.
ಲೋಕೋಪಯೋಗಿ ಇಲಾಖೆಯಿಂದ ₹ 28.85 ಕೋಟಿ ವೆಚ್ಚದಲ್ಲಿ 21 ಕಿ.ಮೀ. ಸಿಸಿ ರಸ್ತೆ ನಿರ್ಮಾಣ, ಡಾಂಬರೀಕರಣ, ಜಲಜೀವನ ಅಭಿಯಾನದಲ್ಲಿ ₹ 80 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯಿಂದ ₹ 30 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಪ್ರವಾಸಿ ಮಂದಿರವನ್ನು ಸೇವೆಗೆ ಸಮರ್ಪಿಸಿದರು.
ಮುಖಂಡರಾದ ತುಕಾರಾಮ ಕಾಗಲ, ಮಡ್ಡೆಪ್ಪ ತೋಳಿನವರ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ರಾಮಣ್ಣ ಸುಂಬಳಿ, ಬಸವರಾಜ ಪಟ್ಟಣಶೆಟ್ಟಿ, ಚಂದ್ರಪ್ಪ ಭೂಸಣ್ಣವರ, ಮುನ್ನಾ ಗಣಾಚಾರಿ, ಮಲ್ಲೇಶ ಪಾಶ್ಚಾಪೂರಿ, ಮುನ್ನಾ ದೇಸಾಯಿ, ಬಾಳಗೌಡ ಪಾಟೀಲ, ಹುಸೇನಖಾನ ದೇಸಾಯಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.