ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪತಿ,ಉದ್ಯಮಿ ಆಣ್ಣಾಸಾಹೇಬ ಜೊಲ್ಲೆ ಬುಧವಾರ ಚಿಕ್ಕೋಡಿಯ ಮಿನಿ ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಸಿದರು. ಆದರೆ, ಟಿಕೆಟ್ ಆಕಾಂಕ್ಷಿಯಾಗಿದ್ದ ರಮೇಶ್ ಕತ್ತಿ ಗೈರಾಗಿದ್ದರು.

ಶಾಸಕರಾದ ಕೆ.ಎಸ್. ಈಶ್ವರಪ್ಪ, ಡಿ.ಎಂ. ಐಹೊಳೆ, ಪಿ. ರಾಜೀವ,ಶಶಿಕಲಾ ಜೊಲ್ಲೆ, ವಿಧಾನಪರಿಷತ್ ವಿರೋಧಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ ಮೊದಲಾದವರು ನಾಮಪತ್ರ ಸಲ್ಲಿಕೆ ವೇಳೆ ಜತೆಯಲ್ಲಿದ್ದರು.

ಟಿಕೆಟ್ ಕೈತಪ್ಪಿದ್ದರಿಂದ ರಮೇಶ್ ಕತ್ತಿ ಬೇಸರಗೊಂಡಿದ್ದಾರೆ. ಹೀಗಾಗಿ ಜೊಲ್ಲೆ ನಾಮಪತ್ರ ಸಲ್ಲಿಕೆ ವೇಳೆ ಅವರು ಹಾಜರಿರಲಿಲ್ಲ.ಅವರ ಸಹೋದರ, ಶಾಸಕ ಉಮೇಶ ಕತ್ತಿ ಕೂಡ ವಿಳಂಬವಾಗಿ ಬಂದು ನಾಯಕರನ್ನು ಸೇರಿಸಿಕೊಂಡರು.

‘ಬುಧವಾರ ಸಂಜೆಚಿಕ್ಕೋಡಿ ಪಟ್ಟಣದಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಕತ್ತಿ ಸಹೋದರರು ಭಾಗವಹಿಸಲಿದ್ದಾರೆ. ಎಲ್ಲರೂ ಕೂಡಿ ಕೆಲಸ ಮಾಡಿ ಪಕ್ಷದ ಅಭ್ಯರ್ಥಿ ಗೆಲ್ಲಿಸುತ್ತಾರೆ ’ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಅವರು ಇದೇ ವೇಳೆ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.