ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕೋಡಿ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ: ಅಣ್ಣಾಸಾಹೇಬ ಜೊಲ್ಲೆ ವಿಶ್ಚಾಸ

Published 1 ಜೂನ್ 2024, 15:19 IST
Last Updated 1 ಜೂನ್ 2024, 15:19 IST
ಅಕ್ಷರ ಗಾತ್ರ

ಚಿಕ್ಕೋಡಿ: ತಾಲ್ಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಚುನಾವಣೆ ಅವಲೋಕನ ಹಾಗೂ ಮತಎಣಿಕೆ ಏಜೆಂಟರ ಕಾರ್ಯಾಗಾರ ಸಭೆ ನಡೆಸಿದರು.

ಜೂನ್‌ 4ರಂದು ನಡೆಯುವ ಮತ ಎಣಿಕೆಯಲ್ಲಿ ಬಿಜೆಪಿ ಪಕ್ಷದ ಎಣಿಕೆ ಏಜೆಂಟರು ಏನೆಲ್ಲ ಕರ್ತವ್ಯ ನಿರ್ವಹಿಸಬೇಕೆಂಬ ಕುರಿತು ಚರ್ಚಿಸಲಾಯಿತು.

ಚಿಕ್ಕೋಡಿಯಲ್ಲಿ ಮತ್ತೊಮ್ಮೆ ಬಿಜೆಪಿ ಗೆಲ್ಲುವ ವಿಶ್ವಾಸ ಇದೆ ಎಂದು ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಶಾಸಕ ದುರ್ಯೋಧನ ಐಹೊಳೆ, ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಮಾಜಿ ಶಾಸಕ ಮಹೇಶ ಕುಮಠಳ್ಳಿ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ಜೊಲ್ಲೆ ಗ್ರೂಪ್‌ನ ಎಲ್ಲ ಅಂಗ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT