ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತಮ ಆರೋಗ್ಯಕ್ಕೆ ಕ್ರೀಡೆ ಅವಶ್ಯ: ಜಿ.ಪಂ. ಸಿಇಒ ಡಾ.ಕೆ.ವಿ.ರಾಜೇಂದ್ರ

Last Updated 16 ಡಿಸೆಂಬರ್ 2019, 12:14 IST
ಅಕ್ಷರ ಗಾತ್ರ

ಬೆಳಗಾವಿ: ‘ಮಾನಸಿಕ, ದೈಹಿಕವಾಗಿ ಉತ್ತಮ ಆರೋಗ್ಯ ಪಡೆಯಲು ಕ್ರೀಡೆಗಳು ಬಹಳ ಅವಶ್ಯ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಹೇಳಿದರು.

ಇಲ್ಲಿನ ಪೊಲೀಸ್‌ ಕವಾಯತು ಮೈದಾನದಲ್ಲಿ ಸೋಮವಾರ ಆರಂಭವಾದ ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

‘ಪೊಲೀಸರು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ಹಾಗೂ ದೈಹಿಕ ಸದೃಢ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಪೊಲೀಸ್‌ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರೂ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು’ ಎಂದರು.

‘ಚುನಾವಣೆ, ಅತಿವೃಷ್ಟಿ ವೇಳೆ ಒತ್ತಡದಲ್ಲಿ ಕಾರ್ಯನಿರ್ವಹಿಸಿದ ಪೊಲೀಸರಿಗೆ, ಒತ್ತಡದಿಂದ ಹೊರ ಬಂದು ವೈಯಕ್ತಿಕ ಹಾಗೂ ವೃತ್ತಿ ಬದುಕಿನಲ್ಲಿ ಹೊಸ ಚೈತನ್ಯದಿಂದ ಮುಂದೆ ಸಾಗಲು ಕ್ರೀಡಾಕೂಟ ಅಗತ್ಯವಾಗಿದೆ. ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು’ ಎಂದು ಸಲಹೆ ನೀಡಿದರು.

ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶಕುಮಾರ ಮಾತನಾಡಿ, ‘2019ರ ವರ್ಷವನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಇಲಾಖೆ ಯಶಸ್ವಿಯಾಗಿದೆ. ಈಗ ಒತ್ತಡದಿಂದ ಹೊರಬರಲು ಮೂರು ದಿನಗಳ ಕ್ರೀಡಾಕೂಟ ಆಯೋಜಿಸಲಾಗಿದೆ. ಎಲ್ಲರೂ ಆಸಕ್ತಿಯಿಂದ ಪಾಲ್ಗೊಳ್ಳಬೇಕು’ ಎಂದು ಹೇಳಿದರು.

ಎಸ್ಪಿ ಲಕ್ಷ್ಮಣ ‌ನಿಂಬರಗಿ, ಡಿಸಿಪಿಗಳಾದ ಸೀಮಾ ಲಾಟ್ಕರ್, ಯಶೋದಾ ಒಂಟಗೋಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT