ಶುಕ್ರವಾರ, ಫೆಬ್ರವರಿ 21, 2020
18 °C

ಮಕ್ಕಳಿಗೆ ಪರಿಶ್ರಮದ ಬಗ್ಗೆ ಕಲಿಸಬೇಕು: ಶೇಗುಣಸಿ ವಿರಕ್ತಮಠದ ಮಹಾಂತ ದೇವರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಥಣಿ: ‘ತಂದೆ–ತಾಯಿಯ ಮೇಲೆ ಸಾಕಷ್ಟು ಜವಾಬ್ದಾರಿ ಇದೆ. ಮಕ್ಕಳಿಗೆ ಪರಿಶ್ರಮದ ಬಗ್ಗೆ ಕಲಿಸಿದರೆ ಸಾಕು. ಅವರಿಗೆ ಒಂದು ಒಳ್ಳೆಯ ಪಲಿತಾಂಶ ಸಿಕ್ಕೇ ಸಿಗುತ್ತದೆ’ ಎಂದು ಶೇಗುಣಸಿ ವಿರಕ್ತಮಠದ ಮಹಾಂತ ದೇವರು ಹೇಳಿದರು.

ಇಲ್ಲಿನ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲೆಯ ಪಾಲಕರಿಗೆ ‘ಆದರ್ಶ ಅಪ್ಪ ಅಮ್ಮ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಎಲ್ಲರೂ ಪಲಿತಾಂಶದ ಮೇಲೆ ದೃಷ್ಟಿ ಇಡುತ್ತಾರೆಯೇ ಹೊರತು ಪರಿಶ್ರಮದ ಮೆಲೆ ದೃಷ್ಟಿ ಇಡುವುದಿಲ್ಲ. ಸಾಧಕರೆಲ್ಲರೂ ಚಿಕ್ಕಂದಿನಿಂದಲೂ ಕಠಿಣ ಪರಿಶ್ರಮಪಟ್ಟಿರುತ್ತಾರೆ. ಇದನ್ನು ಮಕ್ಕಳಿಗೆ ತಿಳಿಸಬೇಕು. ಆನಂದವಾಗಿರುವುದನ್ನು ಅವರಿಗೆ ಕಲಿಸಬೇಕು’ ಎಂದು ಸಲಹೆ ನೀಡಿದರು.

ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ ಮಾತನಾಡಿ, ‘ಶಾಲೆಗಳು ಸಾಮಾನ್ಯವಾಗಿ ಮಕ್ಕಳ ಮೇಲೆ ಮಾತ್ರ ಗಮನ ಕೊಡುತ್ತವೆ. ಆದರೆ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆ ಪಾಲಕರ ಮೇಲೂ ಗಮನ ಕೊಡುತ್ತಿರುವುದು ಅಭಿನಂದನಾರ್ಹ. ಈ ಶಾಲೆಯಿಂದ ಹೊರ ಹೋಗುವವರು ಅಸಾಮಾನ್ಯರಾಗಿರುತ್ತಾರೆ’ ಎಂದರು.

ನಿವೃತ್ತ ಮುಖ್ಯಶಿಕ್ಷಕ ಅಮರೇಶ ಬಿರಾದರ, ‘‌ಮಕ್ಕಳನ್ನು ಉತ್ತಮವಾಗಿ ರೂಪಿಸುವ ನಿಟ್ಟಿನಲ್ಲಿ ಶಿಕ್ಷಕರೊಂದಿಗೆ ಪಾಲಕರ ಜವಾಬ್ದಾರಿಯೂ ಇದೆ’ ಎಂದು ತಿಳಿಸಿದರು.

ರೋಟರಿ ಕ್ಲಬ್‌ ಸಂಸ್ಥಾಪಕ ಅಧ್ಯಕ್ಷ ಸಿದ್ಧಾರೂಢ ಸವದಿ, ಚಿಕ್ಕಟ್ಟಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುರೇಶ ಚಿಕ್ಕಟ್ಟಿ ಮಾತನಾಡಿದರು.

10ನೇ ತರಗತಿ ವಿದ್ಯಾರ್ಥಿ ಶ್ರೇಯಾ ದಾನಪ್ಪನ್ನವರ ಬರೆದ ‘ಮನದಾಳ ತಿಳಿದಾಗ’ ಪುಸ್ತಕ ಬಿಡುಗಡೆ ಮಾಡಲಾಯಿತು.

ಈ ವೇಳೆ ನೌಕರರ ಸಂಘದ ಅಧ್ಯಕ್ಷ ರಾಮಣ್ಣ ದರಿಗೌಡ, ಸಂಸ್ಥೆ ಕಾರ್ಯದರ್ಶಿ ಸದಾಶಿವ ಚಿಕ್ಕಟ್ಟಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು