ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಟಮೂರ ಬಾಳಪ್ಪ ಪ್ರತಿಮೆ ಪ್ರತಿಷ್ಠಾಪನೆಗೆ ಮನವಿ

Published 2 ಜೂನ್ 2024, 13:33 IST
Last Updated 2 ಜೂನ್ 2024, 13:33 IST
ಅಕ್ಷರ ಗಾತ್ರ

ಬೈಲಹೊಂಗಲ: ತಾಲ್ಲೂಕಿನ ಬೇವಿನಕೊಪ್ಪ ಗ್ರಾಮದ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ನೂತನ ಸೇತುವೆಯ ಮುಂಭಾಗದಲ್ಲಿ ವೀರಕೇಸರಿ ಅಮಟೂರ ಬಾಳಪ್ಪನವರ ಮೂರ್ತಿಯನ್ನು ನಿರ್ಮಿಸಿ ಸುತ್ತಲೂ ಉದ್ಯಾನ ನಿರ್ಮಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.

ಗ್ರಾಮದಿಂದ ಶಾಸಕರ ನಿವಾಸಕ್ಕೆ ಭೇಟಿ ನೀಡಿದ ಗ್ರಾಮಸ್ಥರು, ಬೇವಿನಕೊಪ್ಪ, ಸ್ವಾತಂತ್ರ್ಯ ಹೋರಾಟಗಾರ ಬಾಳಪ್ಪನವರ ತ್ಯಾಗ, ಬಲಿದಾನ, ದೇಶಕ್ಕೆ ನೀಡಿದ ಕೊಡುಗೆ ಬಗ್ಗೆ ಮಕ್ಕಳಿಗೆ ಪರಿಚಯಿಸಬೇಕು ಎಂದು ತಿಳಿಸಿದರು.

ಆದಷ್ಟು ಬೇಗ ಕ್ರಮವಹಿಸುವುದಾಗಿ ಶಾಸಕರು ಭರವಸೆ ನೀಡಿದರು.

ಅಮಟೂರ ಬಾಳಪ್ಪ ಟ್ರಸ್ಟ್ ಕಮಿಟಿ ಅಧ್ಯಕ್ಷ ಸೋಮನಗೌಡ ಪಾಟೀಲ, ಹಿರಿಯರಾದ ಶಿವಾಜಿ ಸೋಗಿಮನಿ, ಗ್ರಾಮ‌ ಪಂಚಾಯಿತಿ ಸದಸ್ಯ ರಾಘವೇಂದ್ರ ಸಂಗಪ್ಪನವರ, ಈರನಗೌಡ ಪಾಟೀಲ, ಶಿವಾನಂದ ದಳವಾಯಿ, ನಾಗಪ್ಪಾ ನಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT