ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕೋಡಿ: ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

Published 24 ಮೇ 2023, 12:52 IST
Last Updated 24 ಮೇ 2023, 12:52 IST
ಅಕ್ಷರ ಗಾತ್ರ

ಚಿಕ್ಕೋಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕೋಡಿ ತಾಲ್ಲೂಕು ಘಟಕದಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎ.ಕುಂಬಾರ ತಿಳಿಸಿದ್ದಾರೆ.

ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿ ಸರ್ಕಾರಿ ನೌಕರರಾಗಿಬೇಕು. ಸರ್ಕಾರಿ ನೌಕರರ ಸಂಘದ ಸದಸ್ಯರಾಗಿರಬೇಕು. ವಿದ್ಯಾರ್ಥಿಯ ಪೋಷಕರು ನಿಗಮ, ಮಂಡಳಿ, ವಿಶ್ವವಿದ್ಯಾಲಯ, ಖಾಸಗಿ, ಅನುದಾನಿತ ವಿದ್ಯಾ ಸಂಸ್ಥೆಯ ನೌಕರರು ಆಗಿರಬಾರದು. ಅರ್ಜಿ ಸಲ್ಲಿಸುವಾಗ ಅಂಕಪಟ್ಟಿ, ಇಲಾಖೆ ಸೇವಾ ಧೃಢೀಕರಣ ಪತ್ರ ಹಾಗೂ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರ ಧೃಢೀಕರಣ ಪತ್ರ ಅಪ್‌ಲೋಡ್‌ ಮಾಡಬೇಕು.

ಜಿಲ್ಲಾ, ತಾಲ್ಲೂಕು ಅಥವಾ ಯೋಜನಾ ಶಾಖೆಯ ಅಧ್ಯಕ್ಷರ ಧೃಢೀಕರಣ ಪತ್ರವಿಲ್ಲದೇ ಸಲ್ಲಿಸುವ ಆನ್‌ಲೈನ್ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಮೇ. 31 ಕೊನೆಯ ದಿನ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT