ಗೋಕಾಕ: ‘ಬಸವಣ್ಣನವರ ಅನುಭವ ಮಂಟಪದ ಮಾದರಿಯಲ್ಲಿ ಅರಭಾವಿ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಎಲ್ಲ ಸಮಾಜಗಳನ್ನು ಒಂದುಗೂಡಿಸಿಕೊಂಡು ಅಭಿವೃದ್ಧಿ ಕಾರ್ಯ ಮಾಡುತ್ತಿದ್ದೇನೆ’ ಎಂದು ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ತಳಕಟ್ನಾಳ ಗ್ರಾಮದಲ್ಲಿ ಬುಧವಾರ ₹4 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ವಿವಿಧ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿ ಅನುದಾನ ಬಿಡುಗಡೆ ಮಾಡುವಂತೆ ಕೋರಿದ್ದೇನೆ. ಕೆಲವು ರಸ್ತೆಗಳಿಗೆ ಈಗಾಗಲೇ ಅನುದಾನ ಬಂದಿದೆ. ಉದಗಟ್ಟಿ– ತಳಕಟ್ನಾಳ– ಖಂಡ್ರಟ್ಟಿ ರಸ್ತೆ, ಹಡಗಿನಾಳ ಕ್ರಾಸ್ದಿಂದ ಹಡಗಿನಾಳತನಕ, ಬೀರನಗಡ್ಡಿ ರಸ್ತೆಗಳ ಸುಧಾರಣೆ ಕಾಮಗಾರಿಗಳು ಮಂಜೂರಾಗಿವೆ’ ಎಂದರು.

‘ರೈತರ ತೋಟಪಟ್ಟಿ ಸಂಪರ್ಕ ರಸ್ತೆಗಳನ್ನು ನಮ್ಮ ಸ್ವಂತ ಹಣದಲ್ಲಿ ನಿರ್ಮಾಣ ಮಾಡುತ್ತಿದ್ದೇವೆ. ಈಗಾಗಲೇ 56 ತೋಟದ ಸಂರ್ಪಕ ರಸ್ತೆಗಳನ್ನು ಅಭಿವೃದ್ಧಿ ಮಾಡಿದ್ದು, ಇನ್ನೂ 50 ಅಂಥ ರಸ್ತೆಗಳನ್ನು ನಿರ್ಮಾಣ ಮಾಡಬೇಕಿದೆ’ ಎಂದು ತಿಳಿಸಿದರು.

ಇದೇ ವೇಳೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಅವರು ಉದ್ಘಾಟಿಸಿದರು. ವಿವಿಧ ವಾದ್ಯ ವೃಂದಗಳು, ಆನೆ, ಡೋಲಕ, ಕುಂಭ ಮೇಳವು ಆಕರ್ಷಣೆಯ ಕೇಂದ್ರವಾಗಿತ್ತು. ಗ್ರಾಮದೇವತೆಯ ಜಾತ್ರೆಯು ಸಡಗರ ಸಂಭ್ರಮದಿಂದ ಜರುಗಿತು.

ಕವಲಗುಡ್ಡದ ಅಮರೇಶ್ವರ ಮಹಾರಾಜರು, ತಳಕಟ್ನಾಳದ ಆತ್ಮಾನಂದ ಸ್ವಾಮೀಜಿ, ಕಪರಟ್ಟಿಯ ಬಸವರಾಜ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಲಕ್ಷ್ಮಣ ಮಸಗುಪ್ಪಿ ಪ್ರಾಸ್ತಾವಿಕ ಮಾತನಾಡಿದರು. ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ, ಪ್ರಭಾ ಶುಗರ್ಸ್ ಅಧ್ಯಕ್ಷ ಶಿದ್ಲಿಂಗಪ್ಪ ಕಂಬಳಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಸೇರಿದಂತೆ ಹಲವು ಮುಖಂಡರು ವೇದಿಕೆ ಮೇಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260326-21-983783379

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.