ಮಂಗಳವಾರ, ಜನವರಿ 19, 2021
17 °C

ಸೇನಾ ನೇಮಕಾತಿ ರ‍್ಯಾಲಿ ಫೆ.4ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಮೈದಾನದಲ್ಲಿ ಫೆ.4ರಿಂದ 15ರವರೆಗೆ ಸೇನಾ ನೇಮಕಾತಿ ರ‍್ಯಾಲಿ ನಡೆಸಲಾಗುವುದು’  ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಇಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯದ 6 ಜಿಲ್ಲೆಗಳಿಂದ ಅಭ್ಯರ್ಥಿಗಳು ಬರಲಿದ್ದು ಅವರಿಗೆ ಮೂಲ ಸೌಕರ್ಯ ಕಲ್ಪಿಸಲು ಹಾಗೂ ತೊಂದರೆ ಆಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಸೇನಾ ನೇಮಕಾತಿ ಪ್ರಧಾನ ಕಚೇರಿ ವಲಯದ ಆಶ್ರಯದಲ್ಲಿ ಬೆಳಗಾವಿ, ರಾಯಚೂರು, ಯಾದಗಿರಿ, ಬೀದರ್, ಕೊಪ್ಪಳ ಮತ್ತು ಕಲಬುರ್ಗಿ ಜಿಲ್ಲೆಗಳಿಂದ ಪ್ರವೇಶಪತ್ರ ಪಡೆದ ಅಭ್ಯರ್ಥಿಗಳು ಬರಲಿದ್ದಾರೆ. ಸೈನ್ಯದ ನಿಗದಿತ ವಿಭಾಗಗಳಲ್ಲಿ ದಾಖಲಾತಿಗಾಗಿ ವಯಸ್ಸು, ಶೈಕ್ಷಣಿಕ ಅರ್ಹತೆ ಮತ್ತು ಇತರ ಮಾನದಂಡಗಳ ವಿವರಗಳನ್ನು ಸೈನ್ಯದ ನೇಮಕಾತಿ ಕಚೇರಿಯಿಂದ ಜಾಲತಾಣದ ಮೂಲಕ ಅಭ್ಯರ್ಥಿಗಳ ಆನ್‌ಲೈನ್ ನೋಂದಣಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಒಟ್ಟು 40ಸಾವಿರ ಅಭ್ಯರ್ಥಿಗಳು ನೋಂದಾಯಿಸಿದ್ದಾರೆ. www.joinindianarmy.gov.in ಜಾಲತಾಣದಲ್ಲಿ ನೋಂದಾಯಿಸಿದವರಿಗೆ ಪ್ರವೇಶಪತ್ರಗಳನ್ನು ನೀಡಲಾಗುವುದು’ ಎಂದು ಹೇಳಿದರು.

‘ನೇಮಕಾತಿ ರ‍್ಯಾಲಿ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತ ಹಾಗೂ ಪೊಲೀಸ ಇಲಾಖೆ ಸಂಪೂರ್ಣ ಬೆಂಬಲ, ಸಹಕಾರ ನೀಡಬೇಕು’ ಎಂದು ಸೇನಾ ನೇಮಕಾತಿ ನಿರ್ದೇಶಕ ರಾಹುಲ್ ಆರ್ಯ ಕೋರಿದರು.

ಡಿಸಿಪಿ ವಿಕ್ರಂ ಅಮಟೆ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು