ಶುಕ್ರವಾರ, ಆಗಸ್ಟ್ 19, 2022
27 °C

‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಕೆಪಿಸಿಸಿ ರೂಪಿಸಿರುವ ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಇಲ್ಲಿನ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ‌ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಬುಧವಾರ ಚಾಲನೆ ನೀಡಿದರು.

‘ಕಾರ್ಯಕ್ರಮಕ್ಕೆ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಮೂವರು ಕಾರ್ಯಕರ್ತರನ್ನು ಆಯ್ಕೆ ಮಾಡಲಾಗಿದೆ. ಅವರಿಗೆ ಆರೋಗ್ಯ ಹಸ್ತ ಕಿಟ್‌ಗಳನ್ನು ನೀಡಲಾಗುವುದು. ಕಿಟ್‌ನಲ್ಲಿ ಮಾಸ್ಕ್‌, ಸ್ಯಾನಿಟೈಸರ್‌ಗಳು, ಪಿಪಿಒ ಕಿಟ್, ಫೇಸ್ ಶೀಲ್ಡ್, ಥರ್ಮಲ್ ಸ್ಕ್ಯಾನರ್ಸ್, ಗ್ಲೌಸ್ ಮೊದಲಾದ ಅಗತ್ಯ ವಸ್ತುಗಳಿರುತ್ತವೆ. ಇದೊಂದು ವಿಶಿಷ್ಟ ಯೋಜನೆಯಾಗಿದ್ದು, ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲೂ ತಲಾ ಮೂವರು ಕೊರೊನಾ ಯೋಧರನ್ನು ನಿಯೋಜಿಸಲಾಗುತ್ತದೆ’ ಎಂದು ತಿಳಿಸಿದರು.

‘ಈ ಯೋಧರು ಮನೆ ಮನೆಗೆ ತೆರಳಿ ಕುಟುಂಬದ ಎಲ್ಲ ಸದಸ್ಯರ ತಪಾಸಣೆ ನಡೆಸುವರು. ಕೊರೊನಾ ಲಕ್ಷಣಗಳು ಕಂಡುಬಂದಲ್ಲಿ ವೈದ್ಯಾಧಿಕಾರಿ ಗಮನಕ್ಕೆ ತರುವರು’ ಎಂದರು.

ಯೋಜನೆಯ ಸಂಚಾಲಕರಾದ ಸದಾನಂದ ಡಂಗನವರ, ಸಿ.ಸಿ. ಪಾಟೀಲ, ಯಲ್ಲಪ್ಪ ಡೇಕೊಲ್ಕರ, ಯುವರಾಜ ಕದಂ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಅಡಿವೇಶ ಇಟಗಿ, ಸುರೇಶ ಇಟಗಿ, ಮನೋಹರ ಬೆಳಗಾಂವಕರ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.