ಶನಿವಾರ, 14 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗೋಕಾಕ: ಪೊಲೀಸ್‌ ಅಧಿಕಾರಿಗಳಿಗೆ ಬೆದರಿಕೆ ಒಡ್ಡುತ್ತಿದ್ದವನ ಬಂಧನ

Published : 20 ಆಗಸ್ಟ್ 2024, 15:30 IST
Last Updated : 20 ಆಗಸ್ಟ್ 2024, 15:30 IST
ಫಾಲೋ ಮಾಡಿ
Comments

ಗೋಕಾಕ(ಬೆಳಗಾವಿ ಜಿಲ್ಲೆ): ಜನಪ್ರತಿನಿಧಿ ಎಂದು ಸುಳ್ಳು ಹೇಳಿ, ಬೇರೆ ಬೇರೆ ಮೊಬೈಲ್‌ ಸಂಖ್ಯೆಗಳಿಂದ ಪೊಲೀಸ್‌ ಅಧಿಕಾರಿಗಳಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ನಗರ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. 

‘ಮೂಡಲಗಿ ತಾಲ್ಲೂಕಿನ ಅರಭಾವಿಮಠ ಗ್ರಾಮದ ಸುನೀಲ ವಿಠ್ಠಲ ದಾಸರ (37) ಬಂಧಿತ ಆರೋಪಿ. ತಾನು ಶಾಸಕ ರಮೇಶ ಜಾರಕಿಹೊಳಿ, ಸಂಸದ ಜಗದೀಶ ಶೆಟ್ಟರ್‌ ಎಂದು ಹೇಳಿ ಪೊಲೀಸ್‌ ಅಧಿಕಾರಿಗಳಿಗೆ ಕರೆ ಮಾಡಿ, ತಾನು ಹೇಳಿದಂತೆ ಕೇಳಬೇಕೆಂದು ಪೀಡಿಸುತ್ತಿದ್ದ. ಇಲ್ಲದಿದ್ದರೆ, ವರ್ಗಾವಣೆ ಮಾಡಿಸುವುದಾಗಿ ಬೆದರಿಸುತ್ತಿದ್ದ’ ಎಂದು ಗೋಕಾಕ ಸಿಪಿಐ ಗೋಪಾಲ ರಾಥೋಡ ‘ಪ‍್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT