ಶನಿವಾರ, ಜನವರಿ 18, 2020
19 °C

ತವರು ಅಥಣಿಗೆ ಎಆರ್‌ಟಿಒ ಮಂಜೂರು ಮಾಡಿಸಿದ ಸವದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಅಥಣಿ ಪಟ್ಟಣದಲ್ಲಿ ನೂತನ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿಯನ್ನು (ಎಆರ್‌ಟಿಒ) ಪ್ರಾರಂಭಿಸಬೇಕು ಎನ್ನುವುದು ಆ ಭಾಗದ ಜನರ ಹಲವು ವರ್ಷಗಳ ಬೇಡಿಕೆಯಾಗಿತ್ತು. ಇದೀಗ ಆ ಕಚೇರಿಯನ್ನು ಪ್ರಾರಂಭಿಸಲು ಮಂಜೂರಾತಿ ನೀಡಲಾಗಿದೆ’ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

‘ಅಥಣಿ ಮತ್ತು ರಾಯಬಾಗ ತಾಲ್ಲೂಕುಗಳು ಈ ಕಚೇರಿಯ ವ್ಯಾಪ್ತಿಗೆ ಒಳಪಡಲಿವೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು. ಈ ಭಾಗದಲ್ಲಿ ಕೃಷಿ ಮತ್ತು ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗಿರುವುದರಿಂದ ಸಹಜವಾಗಿಯೇ ವಾಹನಗಳ ಸಂಚಾರ, ಸಾಗಾಟ, ವಹಿವಾಟುಗಳು ಅಧಿಕವಾಗಿವೆ. ಈ ಹಿನ್ನೆಲೆಯಲ್ಲಿ ಈ ಕಚೇರಿಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಕಚೇರಿಗೆ ಕಟ್ಟಡವನ್ನು ಬಾಡಿಗೆ ಆಧಾರದ ಮೇಲೆ ಪಡೆದುಕೊಳ್ಳಬೇಕು. ಅಗತ್ಯವಿರುವ ಹುದ್ದೆಗಳನ್ನು ಇಲಾಖೆಯ ವ್ಯಾಪ್ತಿಯಲ್ಲಿ ಗುರುತಿಸಿ ಸ್ಥಳಾಂತರಿಸಿಕೊಳ್ಳತಕ್ಕದ್ದು’ ಎಂದು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು