ಶನಿವಾರ, ಫೆಬ್ರವರಿ 27, 2021
30 °C

ಉತ್ಸವದ ದಿನ ಅಸಮಾಧಾನದ ಮಾತೇಕೆ?: ಅರುಣ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಉತ್ಸವದ ದಿನ ಅಸಮಾಧಾನದ ಮಾತೇಕೆ? – ಹೀಗೆ ಕೇಳಿದವರು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್.

ಇಲ್ಲಿ ಬಿಜೆಪಿಯಿಂದ ಆಯೋಜಿಸಿರುವ ಜನಸೇವಕ ಸಮಾವೇಶ ಸಮಾರೋಪದಲ್ಲಿ ಪಾಲ್ಗೊಳ್ಳಲು ಸಾಂಬ್ರಾ ವಿಮಾನನಿಲ್ದಾಣಕ್ಕೆ ಭಾನುವಾರ ಬಂದ ಅವರು, ಅಸಮಾಧಾನಿತ ಶಾಸಕರು, ಬ್ಲ್ಯಾಕ್‌ಮೇಲ್ ರಾಜಕಾರಣ, ಸಿ.ಡಿ. ವಿಚಾರದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

‘ಇಂದು ದೊಡ್ಡ ಮಟ್ಟದ ಉತ್ಸವದ ದಿನವಾಗಿದೆ. ಆ ಬಗ್ಗೆ ಈಗೇಕೆ ಮಾತನಾಡುವುದು. ಬಹಳ ದಿನಗಳ ಬಳಿಕ ಇಲ್ಲಿ ಪಕ್ಷದಿಂದ ಬೃಹತ್ ಸಮಾವೇಶ ನಡೆಯುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ನಾವೆಲ್ಲರೂ ಅವರನ್ನು ಅಭಿನಂದಿಸುತ್ತಿದ್ದೇವೆ’ ಎಂದರು.

‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಇಂದು ಚರ್ಚೆ ಆಗುವುದಿಲ್ಲ. ಆದರೆ, ಚುನಾವಣೆಯಲ್ಲಿ ನಾವು ಗೆಲ್ಲಲಿದ್ದೇವೆ’ ಎಂದು ವಿಶ್ವಾಸ ವ್ಯಕ್ತ‍ಪಡಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು