ಮಂಗಳವಾರ, ಮೇ 11, 2021
19 °C

ಬೆಳಗಾವಿ: ಉಪಚುನಾವಣೆ ಕರ್ತವ್ಯದಲ್ಲಿದ್ದ ಎಎಸ್‌ಐ ಹೃದಯಾಘಾತದಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಕರ್ತವ್ಯದಲ್ಲಿದ್ದ ಎಎಸ್‌ಐ ಹೃದಯಾಘಾತದಿಂದ ಶುಕ್ರವಾರ ನಿಧನರಾದರು.

ಜೆ.ಬಿ. ಪೂಜಾರ (57) ಮೃತರು. ಅವರು ಹುಕ್ಕೇರಿ ತಾಲ್ಲೂಕು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಗೋಕಾಕ ವಿಧಾನಸಭಾ ಕ್ಷೇತ್ರದ ಸೆಕ್ಟರ್ ಅಧಿಕಾರಿಯಾಗಿ ಅವರನ್ನು ನೇಮಿಸಲಾಗಿತ್ತು. ಘಟಪ್ರಭಾದ ಎಸ್‍ಬಿಟಿ ಪಿಯು ಕಾಲೇಜಿನ ಮತಗಟ್ಟೆಯಲ್ಲಿ ಪರಿಶೀಲನೆ ನಡೆಸುವ ವೇಳೆ ಕುಸಿದುಬಿದ್ದರು. ಪ್ರಾಥಮಿಕ ವರದಿ ಪ್ರಕಾರ ಅವರು ಹೃದಯಾಘಾತದಿಂದ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು