ಶುಕ್ರವಾರ, ಜೂಲೈ 3, 2020
21 °C

ಸವದತ್ತಿ | ರಸ್ತೆ ಅಪಘಾತದಲ್ಲಿ ಎಎಸ್‌ಐ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸವದತ್ತಿ: ಪಟ್ಟಣದ ಹೊರವಲಯದ ನಿಕ್ಕಂ ಕಲ್ಯಾಣ ಮಂಟಪ ಬಳಿ ಶನಿವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ದ್ವಿಚಕ್ರವಾಹನದಲ್ಲಿ ಸವದತ್ತಿ ಠಾಣೆಯ ಎಎಸ್‌ಐ ಯಲ್ಲ‍ಪ್ಪ ಆರ್. ತಳವಾರ (59) ಮೃತರಾದರು.

ಕರ್ತವ್ಯ ಮುಗಿಸಿ ಸ್ವಗ್ರಾಮ ಬೈಲಹೊಂಗಲದ ಅನಿಗೋಳಕ್ಕೆ ತೆರಳುವಾಗ ಅಪಘಾತ ನಡೆದಿದೆ. ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಇನ್ನೆರಡು ತಿಂಗಳಲ್ಲಿ ನಿವೃತ್ತಿ ಆಗುವವರಿದ್ದರು.

ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಮೃತರ ಕುಟುಂಬಕ್ಕೆ ಭಾನುವಾರ ಸಾಂತ್ವಾನ ಹೇಳಿದರು. ಸರ್ಕಾರದಿಂದ ಬರಬೇಕಾದ ಎಲ್ಲ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು