ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಸೈನಿಕನ ಬಂಧನ

Last Updated 23 ಏಪ್ರಿಲ್ 2020, 13:57 IST
ಅಕ್ಷರ ಗಾತ್ರ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಲಾಕ್‌ಡೌನ್‌ ಆದೇಶದ ಅನುಷ್ಠಾನ ಕಾರ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸಿಆರ್‌ಪಿಎಫ್‌ ಯೋಧ ಒಬ್ಬರನ್ನು ಸದಲಗಾ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಸಚಿನ್ ಸಾವಂತ (27) ಬಂಧಿತ. ಅವರು ರಜೆಯ ಮೇಲೆ ಮನೆಯಲ್ಲಿದ್ದಾರೆ.

‘ಮಾಸ್ಕ್ ಹಾಕಿಕೊಳ್ಳದೆ ಸಾರ್ವಜನಿಕ ಸ್ಥಳದಲ್ಲಿ ವಿನಾಕಾರಣ ಸಂಚರಿಸುವಂತಿಲ್ಲ. ಮನೆಯ ಒಳಗಡೆ ಹೋಗಿ’ ಎಂದು ಸೂಚಿಸಿದ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಅವರ ಮೇಲಿದೆ.

ಇಬ್ಬರು ಕಾನ್‌ಸ್ಟೆಬಲ್‌ಗಳು ಹಾಗೂ ಯೋಧ ನಡುವೆ ಜಟಾಪಟಿ ನಡೆದಿದೆ. ಪರಸ್ಪರ ಕೈ ಕೈ ಮಿಲಾಯಿಸಿ ಹೊಡೆದಾಡಿಕೊಂಡಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಅನಿಲಕುಮಾರ ಕುಂಬಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಧಿತನನ್ನು ಬೆಳಗಾವಿಯ ಹಿಂಡಲಗಾ ಕಾರಾಗೃಹಕ್ಕೆ ಕಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT