ಅಥಣಿ: ಅಥಣಿ-ಮಧಭಾವಿ ರಸ್ತೆಯಲ್ಲಿ ಹಣಮಾಪುರ ಕ್ರಾಸ್ ಬಳಿ ಟೆಂಪೋ–ಕ್ರೂಸರ್ ವಾಹನಗಳ ಮಧ್ಯೆ ಮಂಗಳವಾರ ರಾತ್ರಿ ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳು ಸಂಪೂರ್ಣ ನುಜ್ಜುಗುಜ್ಜಾಗಿವೆ.

‘ಮಹಾರಾಷ್ಟ್ರದಲ್ಲಿ ಗುಟ್ಕಾ ಮಾರಾಟ ನಿಷೇಧಿಸಲಾಗಿದೆ. ಆದರೆ, ಅಪಘಾತಕ್ಕೀಡಾದ ಟೆಂಪೋದಲ್ಲಿ ಅಥಣಿಯಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಗುಟ್ಕಾ ಸಾಗಿಸಲಾಗುತ್ತಿತ್ತು. ಪೊಲೀಸರ ಸಮ್ಮುಖದಲ್ಲೇ ಗುಟ್ಕಾಗಳನ್ನು ಇರಿಸಿದ್ದ ಚೀಲಗಳನ್ನು ಬೇರೆ ವಾಹನಕ್ಕೆ ಸ್ಥಳಾಂತರಿಸಿ ಸಾಗಿಸಲಾಗಿದೆ’ ಎಂದು ಕ್ರೂಸರ್ ವಾಹನದ ಚಾಲಕ ಮತ್ತು ಸ್ಥಳೀಯರು ಆರೋಪಿಸಿದ್ದಾರೆ.

‘ಗುಟ್ಕಾ ಸಾಗಣೆಗೆ ಸಂಬಂಧಿಸಿ ಯಾವುದೇ ದೂರು ದಾಖಲಾಗಿಲ್ಲ. ಒಂದುವೇಳೆ ದೂರು ಬಂದರೆ ಪರಿಶೀಲಿಸಿ ಕ್ರಮ ವಹಿಸುತ್ತೇವೆ’ ಎಂದು ಅಥಣಿ ಡಿವೈಎಸ್ಪಿ ಪ್ರಶಾಂತ ಮುನ್ನೋಳಿ ‘ಪ್ರಜಾವಾಣಿ’ಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-22-1193680841

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.