ಶನಿವಾರ, ಸೆಪ್ಟೆಂಬರ್ 21, 2019
21 °C

‘ದಕ್ಷ ಶಿಕ್ಷಕ’ ಪ್ರಶಸ್ತಿ ಪ್ರದಾನ

Published:
Updated:
Prajavani

ಅಥಣಿ: ‘ಪ್ರತಿಭಾವಂತ ಹಾಗೂ ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರಿ ಶಾಲೆ ಶಿಕ್ಷಕರು ಪ್ರಾಮಾಣಿಕವಾಗಿ ಶ್ರಮಿಸಬೇಕು’ ಎಂದು ಚಿಕ್ಕಟ್ಟಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುರೇಶ ಚಿಕ್ಕಟ್ಟಿ ತಿಳಿಸಿದರು.

ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆ ಶಿಕ್ಷಕರಿಗೆ ಕೊಡಮಾಡುವ 2019-20ನೇ ಸಾಲಿನ ‘ದಕ್ಷ ಶಿಕ್ಷಕ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಶಿಕ್ಷಕರ ಸೇವೆ ನಿವೃತ್ತಿಯವರೆಗೂ ನಿರಂತರವಾಗಿ ಸಾಗುತ್ತಿರಬೇಕು’ ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಐ.ಆರ್. ದ್ರಾಕ್ಷಿ ಹೇಳಿದರು.

ರಾಜಶೇಖರ ಪತ್ತಾರ (ಸಹ ಶಿಕ್ಷಕ, ಸರ್ಕಾರಿ ಪ್ರೌಢಶಾಲೆ ಶಿರಹಟ್ಟಿ), ಕೈಲಾಸ ಮದಭಾವಿ (ಸಹ ಶಿಕ್ಷಕ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿವನೂರ), ದಿಲೀಪ ಲ. ಕೊರಬು (ಸಹ ಶಿಕ್ಷಕ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಹಾಪುರ) ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣ ಸಂಯೋಜಕ ಶ್ರೀಶೈಲ ಪ. ಸನದಿ ಮಾತನಾಡಿದರು. ಸಂಸ್ಥೆ ಕಾರ್ಯದರ್ಶಿ ಸದಾಶಿವ ಚಿಕ್ಕಟ್ಟಿ ಇದ್ದರು.

ಮುಖ್ಯಶಿಕ್ಷಕ ಟ.ಎ. ಮೊಗೇರ ಸ್ವಾಗತಿಸಿದರು. ಶಾಲೆಯ ಆಡಳಿತಾಧಿಕಾರಿ ಜ್ಯೋತಿ ಪಾಟೀಲ ನಿರೂಪಿಸಿದರು. ಶಿಕ್ಷಕ ವಿಶ್ವನಾಥ ಸೌದಾಗರ ವಂದಿಸಿದರು.

Post Comments (+)