ಅಥಣಿ: ಅಥಣಿ ಹಾಗೂ ಕಾಗವಾಡ ತಾಲ್ಲೂಕಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 2024-25 ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ವಿಮಾ ಕಂಪನಿಯಿಂದ ರೈತರ ಬೆಳೆ ವಿಮೆ ಪ್ರಸ್ತಾವಗಳು ತಿರಸ್ಕೃತಗೊಂಡಿದ್ದು, ಮುಂಗಾರು ಹಂಗಾಮಿನಲ್ಲಿ ಅಥಣಿ ತಾಲ್ಲೂಕಿನಿಂದ 943 ಪ್ರಸ್ತಾವ ಹಾಗೂ ಕಾಗವಾಡ ತಾಲ್ಲೂಕಿನಿಂದ 323 ಪ್ರಸ್ತಾವಗಳು ಮತ್ತು ಹಿಂಗಾರು ಹಂಗಾಮಿನಲ್ಲಿ ಒಟ್ಟು 57 ಪ್ರಸ್ತಾವಗಳು ತಿರಸ್ಕೃತಗೊಂಡಿವೆ

ಪ್ರಸ್ತಾವಗಳು, ಬೆಳೆ ವಿಮೆ ನೋಂದಣಿ ಹಾಗೂ ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ಹೋಲಿಕೆಯಾಗದ ಕಾರಣ ತಿರಸ್ಕೃತಗೊಂಡಿವೆ. ತಿರಸ್ಕೃತಗೊಂಡ ಪಟ್ಟಿಯನ್ನು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರಗಳಾದ ಅಥಣಿ, ಅನಂತಪುರ, ತೆಲಸಂಗ ಹಾಗೂ ಕಾಗವಾಡ ಕಚೇರಿಯ ಸೂಚನಾ ಫಲಕಕ್ಕೆ ಲಗತ್ತಿಸಲಾಗಿದೆ. ಈ ಕುರಿತು ಆಕ್ಷೇಪಣೆಗಳಿದ್ದರೆ ರೈತರು ನಿಖರವಾದ ದಾಖಲಾತಿಗಳಾದ ಬೆಳೆ ನಮೂದಾದ ಪಹಣಿ (ಉತಾರ), ಬೆಂಬಲ ಬೆಲೆ ಪ್ರಯೋಜನ ಪಡೆದ ರಸೀದಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದ ದಾಖಲೆಗಳನ್ನು ಏಪ್ರಿಲ್ 24ರ ರೊಳಗಾಗಿ ಸಂಬಂಧಿಸಿದ ಕಚೇರಿಗಳಲ್ಲಿ ಸಲ್ಲಿಸಬೇಕು ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ನಿಂಗಣ್ಣಗೌಡಾ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-21-1603440579

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.