ಅಥಣಿ: ಅಥಣಿ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಅವರ ಸಿಬ್ಬಂದಿ ನ್ಯಾಯವಾದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರ ಮೇಲೆಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ಮೇಲೆಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಅಥಣಿ ನ್ಯಾಯವಾದಿಗಳ ಸಂಘದ ಸದಸ್ಯರು ಕೋರ್ಟ್ ಕಲಾಪ ಬಹಿಷ್ಕರಿಸಿ ಪಟ್ಟಣದ ಶಿವಯೋಗಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ನಂತರ ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದರು.

ಅಥಣಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎ. ಎ. ಹುದ್ದಾರ, ಸತ್ತಿ ಗ್ರಾಮದಲ್ಲಿ ಮೇ 30ರಂದು ಬುರಾನಸಾಬ ಜಾತ್ರಾ ಉತ್ಸವದಲ್ಲಿ ಎರಡು ಕೋಮುಗಳ ಮಧ್ಯೆ ನಡೆದ ಗಲಾಟೆಯನ್ನು ನಿಯಂತ್ರಿಸುವಾಗ ಮನೆಯ ಮುಂದೆ ಕುಳಿತುಕೊಂಡಿದ್ದ ನ್ಯಾಯವಾದಿ ಮಲ್ಲಿಕಾರ್ಜುನ ಕೋರಿ ಅವರನ್ನು ಅಥಣಿ ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ ಹಾಗೂ ಅವರ ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದರು.

ವಕೀಲರು ತಮಗೆ ಆಗಿರುವ ಅನ್ಯಾಯಕ್ಕೆ ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಆದರೆ ಇಲ್ಲಿನ ಪಿಎಸ್ಐ ಇನ್ನೂವರೆಗೆ ಎಫ್ಐಆರ್ ದಾಖಲಿಸಿಕೊಂಡಿಲ್ಲ. ಮೇಲಾಧಿಕಾರಿಗಳು ಶಿಸ್ತು ಕ್ರಮ ಕೈಗೊಂಡು ಕೂಡಲೇ ಅವರನ್ನು ಅಮಾನತುಗೊಳಿಸಬೇಕು ಎಂದರು.

ನ್ಯಾಯವಾದಿಗಳಾದ ಕಲ್ಲಪ್ಪ ವಣಜೋಳ, ದಯಾನಂದ ವಾಘಮೋರೆ, ಮಟ್ಟಪ್ಪನವರ, ಶಶಿಕಾಂತ ಬಾಡಗಿ, ಮಿತೇಶ ಪಟ್ಟಣ, ಬಸವರಾಜ ಡಂಗಿ, ವಿನಯ್ ಗೌಡ ಪಾಟೀಲ, ವಕೀಲರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-21-1127848072

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.