ಅಥಣಿ: ‘ರೈತರ ಮತ್ತು ತಮ್ಮ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಸುಮ್ಮನಿರುವುದಿಲ್ಲ’ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ತಾಲ್ಲೂಕಿನ ತೇಲಸಂಗ ಗ್ರಾಮದಲ್ಲಿ ಶನಿವಾರ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಈ ವರ್ಷ ಲಕ್ಷ್ಮಣ ಸವದಿಯನ್ನು ಟ್ರ್ಯಾಕ್ಟರ್ ಹೊಡೆಯಲು ಕಳಿಸುತ್ತೇನೆ ಎಂದು ಕೆಲವರು ಮಾತನಾಡುತ್ತಿದ್ದಾರೆ. ಹೌದು, ನಾನು ರೈತನ ಹೊಟ್ಟೆಯಲ್ಲಿ ಹುಟ್ಟಿದ್ದೇನೆ, ಎತ್ತನ್ನು ಹೊಡೆಯುತ್ತೇನೆ, ಟ್ರ್ಯಾಕ್ಟರ್ ಕೂಡ ಹೊಡೆಯುತ್ತೇನೆ. ಆದರೆ ಅನ್ಯಾಯ ಸಹಿಸುವುದಿಲ್ಲ’ ಎಂದು ಹೇಳಿದರು.

‘ರಾಜ್ಯದಲ್ಲೇ ಅತಿ ಹೆಚ್ಚು, ಅಂದರೆ ವಾರ್ಷಿಕ 76 ಲಕ್ಷ ಟನ್ ಕಬ್ಬು ಬೆಳೆಯುವ ಹೆಮ್ಮೆಯ ತಾಲ್ಲೂಕು ನಮ್ಮದು. ಅಮ್ಮಾಜೇಶ್ವರಿ-ಬಸವೇಶ್ವರ ಏತ ನೀರಾವರಿ ಯೋಜನೆ ಪೂರ್ಣಗೊಂಡ ಬಳಿಕ, ಮುಂದಿನ ಕೇವಲ ಎರಡು ವರ್ಷಗಳಲ್ಲಿ ಇದು 1 ಕೋಟಿ ಟನ್ ಕಬ್ಬು ಬೆಳೆಯುವ ನಾಡಾಗಿ ಹೊರಹೊಮ್ಮಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೈತರು ಬೆವರು ಹರಿಸಿ ಬೆಳೆದ ಕಬ್ಬನ್ನು ಕಾರ್ಖಾನೆಗೆ ತಂದಾಗ ನಡೆಯುತ್ತಿರುವ ಮೋಸದ ಬಗ್ಗೆ ತೀವ್ರ ಕಿಡಿಕಾರಿದ ಅವರು, ಒಂದು ಟ್ರಿಪ್ಗೆ ಎರಡು-ಮೂರು ಟನ್ ತೂಕ ಕದ್ದು ರೈತರ ರಕ್ತ ಹೀರುವವರಿಗೆ, ಒಂದು ಎಕರೆ ಕಬ್ಬು ಬೆಳೆಯಲು ರೈತ ಪಡುವ ಕಷ್ಟವೇನು ಎಂಬುದು ತಿಳಿದಿಲ್ಲ. ಇಂತಹ ಮೋಸದಾಟಗಳನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಕಾರ್ಖಾನೆಗಳಿಗೂ ಹಾಗೂ ದಲ್ಲಾಳಿಗಳಿಗೂ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-21-127843531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.