ಅಥಣಿ: ಅಥಣಿ ಸಾರಿಗೆ ಘಟಕದಿಂದ ನೆರೆಯ ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶಕ್ಕೆ ಸಾರಿಗೆ ಬಸ್ ಸೌಕರ್ಯ ಆರಂಭಿಸಲಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅವರು ಈಚೆಗೆ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಅಥಣಿ- ಪುಣೆ ಮತ್ತು ಅಥಣಿ- ಕೊಲ್ಹಾಪುರ ನೂತನ ಸಾರಿಗೆ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು.

‘ಅಥಣಿ ಗಡಿ ಭಾಗದಲ್ಲಿರುವುದರಿಂದ ನೆರೆಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಕ್ಕೆ ಜನರು ಅನೇಕ ವಾಣಿಜ್ಯ ವ್ಯವಹಾರಗಳಿಗೆ, ಧಾರ್ಮಿಕ ಕ್ಷೇತ್ರಗಳಿಗೆ ತೆರಳುತ್ತಾರೆ. ಆದ್ದರಿಂದ ಮೊದಲ ಹಂತವಾಗಿ ಮಹಾರಾಷ್ಟ್ರ ರಾಜ್ಯಕ್ಕೆ ಅಂತರರಾಜ್ಯ ಬಸ್ ಸೇವೆ ಆರಂಭಿಸಲಾಗಿದೆ. ಮುಂಬರುವ ದಿನಗಳಲ್ಲಿ ಆಂಧ್ರ ಪ್ರದೇಶದ ಶ್ರೀಶೈಲಂಗೆ ಸಾರಿಗೆ ಸೇವೆ ಆರಂಭಿಸಲಾಗುವುದು’ ಎಂದರು.

‘ಅಥಣಿ ಘಟಕದಿಂದ ಚಿಕ್ಕೋಡಿ, ಬೆಳಗಾವಿ ಮತ್ತು ವಿಜಯಪುರಕ್ಕೆ ತಡೆರಹಿತ ವಾಹನ ಸೇವೆ ಆರಂಭಿಸಬೇಕು ಎಂಬ ಬೇಡಿಕೆ ಹೆಚ್ಚಾಗಿದೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ತಡೆರಹಿತ ಸಾರಿಗೆ ಸೇವೆ ಆರಂಭಿಸಲಾಗುವುದು. ಅಥಣಿ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ವಿದ್ಯಾರ್ಥಿ ಸ್ನೇಹಿ’ ನೂತನ ಸಾರಿಗೆ ಸೇವೆ ಆರಂಭಿಸುವ ಸಂಕಲ್ಪ ಹೊಂದಲಾಗಿದೆ’ ಎಂದು ಹೇಳಿದರು.

ಚಿಕ್ಕೋಡಿ ವಿಭಾಗಿಯ ಸಾರಿಗೆ ನಿಯಂತ್ರಣಾಧಿಕಾರಿ ಮಹಾದೇವ ಮುಂಜೆ ಮಾತನಾಡಿ, ‘ಅಥಣಿ ಸಾರಿಗೆ ಘಟಕದಿಂದ ಆರಂಭವಾಗಿರುವ ಅಥಣಿ– ಪುಣೆ ಬಸ್ ಪ್ರತಿದಿನ ಬೆಳಿಗ್ಗೆ ಇಲ್ಲಿಂದ 7.45 ಕ್ಕೆ ಮತ್ತು ಅಥಣಿ– ಕೊಲ್ಹಾಪುರ ಬಸ್ ಬೆಳಿಗ್ಗೆ 7ಕ್ಕೆ ಹೊರಡಲಿದೆ’ ಎಂದರು.

ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಸಿದ್ದಾರ್ಥ ಸಿಂಗೆ, ಪುರಸಭೆ ಸದಸ್ಯ ಕಲ್ಲೇಶ್ ಮಡ್ಡಿ, ಕಾಂಗ್ರೆಸ್ ಮುಖಂಡ ಶ್ಯಾಮ ಪೂಜಾರಿ, ಶ್ರೀನಿವಾಸ ಪಟ್ಟಣ, ಅಥಣಿ ಸಾರಿಗೆ ಘಟಕದ ವ್ಯವಸ್ಥಾಪಕ ಎನ್.ಎಂ. ಕೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-21-1774480521

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.