ಅಥಣಿ: ಸರ್ಕಾರಿ ನಿವೃತ್ತ ನೌಕರರಿಗೆ ನೀಡುತ್ತಿರುವ ಪಿಂಚಣಿಯಲ್ಲಿ ಯಾವುದೇ ಸೌಲಭ್ಯ ಕಡಿತಗೊಳಿಸಬಾರದು ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಥಣಿ ತಾಲೂಕ ಘಟಕದ ಅಧ್ಯಕ್ಷ ಎಸ್. ಎಸ್. ಹೂಟಿ ಆಗ್ರಹಿಸಿದರು.

ಅವರು ಶುಕ್ರವಾರ ಇಲ್ಲಿನ ಮಿನಿ ವಿಧಾನಸೌಧ ತಹಸೀಲ್ದಾರ್ ಕಾರ್ಯಾಲಯದಲ್ಲಿ ಗ್ರೇಡ್ 2 ತಹಸೀಲ್ದಾರ್ ಬಿ ವೈ ಹೊಸಕೇರಿ ಅವರಿಗೆ ಮನವಿ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಇತ್ತೀಚಿಗೆ ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಆರ್ಥಿಕ ಬಿಲ್ನಲ್ಲಿ 2025ರ ಏಪ್ರಿಲ್ 1ಕ್ಕಿಂತ ಮುಂಚೆ ಸೇವಾ ನಿವೃತ್ತಿ ಹೊಂದಿದ ಸರ್ಕಾರಿ ನೌಕರರಿಗೆ ನೀಡುವ ಪಿಂಚಣಿ ಮತ್ತು ಕೌಟುಂಬಿಕ ಪಿಂಚಣಿಯಲ್ಲಿನ ಕೆಲವು ಸೌಲಭ್ಯ ಕಡಿತಗೊಳಿಸುವುದಾಗಿ ತಿಳಿಸಿದ್ದಾರೆ. ಇದರಿಂದ ನಿವೃತ್ತ ನೌಕರರು ಮತ್ತು ಅವರನ್ನು ಅವಲಂಬಿಸಿದ ಕುಟುಂಬಸ್ಥರು ಸಂಕಷ್ಟಕ್ಕೆ ಸಿಲುಕಲಿದ್ದು, ಯಾವುದೇ ಸೌಲಭ್ಯ ಕಡಿತಗೊಳಿಸಬಾರದು ಎಂದರು.

ಅಥಣಿ ತಾಲೂಕ ನಿವೃತ್ತ ನೌಕರರ ಸಂಘದ ಪ್ರಕಾಶ ಖೋತ, ಐ. ಕೆ. ಕುಂಬಾರ, ಆರ್. ಎಸ್. ಚಿಗರಿ, ಶಿರಾಗಾಂವಕರ, ಎಸ್. ಎ. ಗಸ್ತಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-21-1404637296

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.