ಅಥಣಿ: ‘ಪಟ್ಟಣದ ಹೊರವಲಯದ ಆರ್ಟಿಓ ಕಚೇರಿ ಹತ್ತಿರ ನಿರ್ಮಾಣವಾಗುತ್ತಿರುವ ಶ್ರಮಿಕರ ವಸತಿ ಶಾಲೆ ಕಟ್ಟಡ 2 ವರ್ಷಗಳಲ್ಲಿ ಪೂರ್ಣಗೊಂಡು ತಾಲ್ಲೂಕಿನ ಕಾರ್ಮಿಕರ ಮಕ್ಕಳಿಗೆ ಉಚಿತವಾದ ಗುಣಮಟ್ಟದ ಶಿಕ್ಷಣ ದೊರಕಲಿದೆ’ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಇಲ್ಲಿನ ಶಿವಯೋಗಿ ವೃತ್ತದಲ್ಲಿ ಅಥಣಿ ತಾಲ್ಲೂಕು ಕಟ್ಟಡ ನಿರ್ಮಾಣ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಶುಕ್ರವಾರ ನಡೆದ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘8 ಎಕರೆ ಸರ್ಕಾರಿ ಜಮೀನನಲ್ಲಿ ಕಾರ್ಮಿಕ ಇಲಾಖೆಯಿಂದ ₹36 ಕೋಟಿ ಅನುದಾನ ಪಡೆದುಕೊಳ್ಳಲಾಗಿದೆ.ಹೈಟೆಕ್ ಸೌಲಭ್ಯಗಳನ್ನು ಹೊಂದಿರುವ ಕಟ್ಟಡ ನಿರ್ಮಿಸಲಾಗುವುದು. ತಾಲ್ಲೂಕಿನ 7 ಸಾವಿರಕ್ಕೂ ಅಧಿಕ ಕಾರ್ಮಿಕ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ಇದರಿಂದ ಅನುಕೂಲವಾಗಲಿದೆ’ ಎಂದರು.

ಪುರಸಭೆಯ ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ ಪ್ರಸ್ತಾವಿಕ ಮಾತನಾಡಿ, ‘ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ,ಗುಣಮಟ್ಟದ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಶಾಸಕರು ತಾಲ್ಲೂಕಿಗೆ ಶ್ರಮಿಕರ ವಸತಿ ಶಾಲೆ ತಂದಿರುವುದು ಶ್ಲಾಘನೀಯ’ ಎಂದರು.

ಕಾರ್ಮಿಕ ಇಲಾಖೆಯ ತಾಲ್ಲೂಕು ನಿರೀಕ್ಷಕಿ ಭುವನೇಶ್ವರಿ ಡಾಲೆ ಮಾತನಾಡಿ, ‘ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಮತ್ತು ಅವರ ಮಕ್ಕಳ ಶಿಕ್ಷಣಕ್ಕೆ, ಕುಟುಂಬದ ಹಿತರಕ್ಷಣೆಗಾಗಿ ಅನೇಕ ಸವಲತ್ತುಗಳು, ಧನಸಹಾಯ ದೊರಕುತ್ತವೆ. ಅವುಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಈ ವೇಳೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ಪಾಸಾದ ಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಗುತ್ತಿಗೆದಾರ ರಾಜು ಆಲಬಾಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ಮತ್ತು ಸುರಕ್ಷತಾ ಕಿಟ್ ವಿತರಿಸಿದರು.

ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಅಥಣಿ ಪಟ್ಟಣದ ಶಿವಯೋಗಿ ವೃತ್ತದಿಂದ ಆರಂಭವಾದ ಶೋಭಾ ಯಾತ್ರೆಗೆ ಶಾಸಕ ಲಕ್ಷ್ಮಣ ಸವದಿ ಚಾಲನೆ ನೀಡಿದರು.

ಸಮಾರಂಭದ ಸಾನ್ನಿಧ್ಯ ವಹಿಸಿದ್ದ ಶೆಟ್ಟರ ಮಠದ ಮರಳಸಿದ್ದ ಸ್ವಾಮೀಜಿ ಆಶೀರ್ವಚನ ನೀಡಿದರು. ಗುತ್ತಿಗೆದಾರ ರಾಜು ಆಲಬಾಳ, ಕಾರ್ಮಿಕ ಸಂಘಟನೆಯ ಸಲಹಾ ಸಮಿತಿಯ ಅಧ್ಯಕ್ಷ ಸುರೇಶ್ ಮೋಪಗಾರ, ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ್ ನಿಕ್ಕಮ, ಉಪಾಧ್ಯಕ್ಷ ಕೇದಾರಿ ಹಳ್ಳದಮಳ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಐಗಳಿ, ಖಜಾಂಚಿ ಕುಮಾರ ಬಡಿಗೇರ ಸೇರಿದಂತೆ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-21-500710051

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.