ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಕಲಿ ವೈದ್ಯನ ಆಸ್ಪತ್ರೆ ಮೇಲೆ ದಾಳಿ

Published 29 ಜೂನ್ 2024, 6:43 IST
Last Updated 29 ಜೂನ್ 2024, 6:43 IST
ಅಕ್ಷರ ಗಾತ್ರ

ಚಿಕ್ಕೋಡಿ: ತಾಲ್ಲೂಕಿನ ಕರೋಶಿ ಗ್ರಾಮದಲ್ಲಿ ಪ್ರಕಾಶ ಕೆಂಗಾರೆ ಎಂಬ ನಕಲಿ ವೈದ್ಯ ನಡೆಸುತ್ತಿದ್ದ ಆಸ್ಪತ್ರೆ ಮೇಲೆ ಚಿಕ್ಕೋಡಿ ತಹಶೀಲ್ದಾರ್‌ ಚಿದಂಬರ ಕುಲಕರ್ಣಿ, ಹೆಚ್ಚುವರಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಗಡದ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಕುಮಾರ ಭಾಗಾಯಿ ಅವರು ಗುರುವಾರ ತಡರಾತ್ರಿ ದಾಳಿ ನಡೆಸಿ, ಪರಿಶೀಲಿಸಿದರು.

ಪ್ರಕಾಶ ಕೆಂಗಾರೆ ಕುರಿತು ಜನಸ್ಪಂದನ ಸಭೆಯಲ್ಲಿ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು.

‘ದೂರು ಆಧರಿಸಿ ಆರೋಪಿಗೆ ನೋಟಿಸ್ ಕೂಡ ನೀಡಲಾಗಿತ್ತು. ಆದರೆ, ಅದಕ್ಕೆ ಉತ್ತರಿಸದೇ ಆತ ಮೂರು ದಿನಗಳಿಂದ ನಾಪತ್ತೆಯಾದ ಕಾರಣ ಆಸ್ಪತ್ರೆ ಮೇಲೆ ದಾಳಿ ನಡೆಸಿದೆವು’ ಎಂದು ಡಾ.ಎಸ್.ಎಸ್.ಗಡದ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT