ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ತರಬೇತಿಗೆ ಆಡಿಷನ್ 25ರಂದು

Last Updated 21 ನವೆಂಬರ್ 2020, 4:44 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಯುವ ರಂಗ ಸಾಂಸ್ಕೃತಿಕ ಸಂಸ್ಥೆಯಿಂದ ಹಮ್ಮಿಕೊಂಡಿರುವ ಉಚಿತ ಅಭಿನಯ ತರಬೇತಿ ಶಿಬಿರಕ್ಕೆ ‍ಪ್ರತಿಭೆಗಳ ಆಯ್ಕೆಗಾಗಿ ನ. 25ರಂದು ಬೆಳಿಗ್ಗೆ 10.30ಕ್ಕೆ ರಾಣಿ ಚನ್ನಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನ ಆವರಣದಲ್ಲಿ ಆಡಿಷನ್ ಆಯೋಜಿಸಲಾಗಿದೆ.

‘ನ. 25ರಿಂದ ಡಿಸೆಂಬರ್ ಅಂತ್ಯದವರೆಗೆ ಶಿಬಿರ ನಡೆಯಲಿದೆ. ಎಲೆಮರೆ ಕಾಯಿಯಂತಿರುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಉದ್ದೇಶ ನಮ್ಮದು. ರಂಗಸಂಗೀತ, ಮೈಮ್, ಸಿನಿಮಾ ರಸಗ್ರಹಣ, ರಂಗಸಜ್ಜಿಕೆ, ನಿರ್ದೇಶನ, ಚಿತ್ರಕಲೆ ಮೊದಲಾದ ವಿಷಯಗಳ ಬಗ್ಗೆ ತಜ್ಞರಿಂದ ತರಬೇತಿ ಕೊಡಿಸಲಾಗುವುದು. ಅಂತ್ಯದಲ್ಲಿ ಶಿಬಿರಾರ್ಥಿಗಳಿಂದ ಪ್ರಯೋಗ ಪ್ರದರ್ಶನ ಹಮ್ಮಿಕೊಳ್ಳಲಾಗುವುದು. 15 ಮಂದಿಗೆ ಮಾತ್ರ ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಮೊ: 8073080390 ಸಂಪರ್ಕಿಸಬಹುದು’ ಎಂದು ಯವ ರಂಗದ ಅಧ್ಯಕ್ಷ ರಾಜು ಮಠಪತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT