ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶೋಕಗೆ ‘ಗಡಿನಾಡ ಚೇತನ’ ಪ್ರಶಸ್ತಿ

Last Updated 28 ಜನವರಿ 2023, 6:26 IST
ಅಕ್ಷರ ಗಾತ್ರ

ಬೆಳಗಾವಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನೀಡುವ ‘ಗಡಿನಾಡ ಚೇತನ’ ಪ್ರಶಸ್ತಿಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಭಾಜನರಾಗಿದ್ದಾರೆ.

ಕರ್ನಾಟಕ ಏಕೀಕರಣ ಹೋರಾಟದ ವೀರಾಗ್ರಣಿ ಡಾ.ಜಯದೇವಿತಾಯಿ ಲಿಗಾಡೆ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿಯನ್ನು ಅಶೋಕ ಚಂದರಗಿ ಪಡೆದಿದ್ದಾರೆ. ಕಳೆದ ಬಾರಿ ಇದೇ ಪ್ರಶಸ್ತಿಯನ್ನು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ನೀಡಲಾಗಿತ್ತು.

ಎಂಇಎಸ್‌ ಉಪಟಳದ ಮಧ್ಯೆಯೂ ಗಡಿ ಜಿಲ್ಲೆಯಲ್ಲಿ ಕನ್ನಡಪರ ಹೋರಾಟವನ್ನು ಜೀವಂತವಾಗಿ ಇಟ್ಟವರಲ್ಲಿ ಅಶೋಕ ಚಂದರಗಿ ಕೂಡ ಒಬ್ಬರು. ಕನ್ನಡ ಸಾಹಿತ್ಯ, ಸಂಘಟನೆ, ಪತ್ರಿಕೋದ್ಯಮ, ಚಳವಳಿ ಹೀಗೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿದ್ದಾರೆ. ಕರ್ನಾಟಕ ಗಡಿ ರಕ್ಷಣೆ ಹೋರಾಟ, ಕಳಸಾ– ಬಂಡೂರಿ ನಾಲಾ ಯೋಜನೆಗಾಗಿ ಮಾಡಿದ ಚಳವಳಿ ಸೇರಿದಂತೆ ನಾಲ್ಕು ದಶಕಗಳಿಂದ ಅವರ ಹೋರಾಟದ ಬದುಕನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಬೆಂಗಳೂರಿನಲ್ಲಿ ಫೆ.2ರಂದು ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT