ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗವಿಮಠಗೆ ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ ಪ್ರಶಸ್ತಿ

Published 2 ಮಾರ್ಚ್ 2024, 5:57 IST
Last Updated 2 ಮಾರ್ಚ್ 2024, 5:57 IST
ಅಕ್ಷರ ಗಾತ್ರ

ಬೆಳಗಾವಿ: ಕನ್ನಡ ಗಡಿ ಅಭಿವೃದ್ಧಿ ಪ್ರಾಧಿಕಾರ ನೀಡುವ ‘ಕಯ್ಯಾರ ಕಿಞ್ಞಣ್ಣ ರೈ ಗಡಿನಾಡ ಚೇತನ’ ಪ್ರಶಸ್ತಿಗೆ ಇಲ್ಲಿನ ಲೇಖಕ ಬಿ.ಎಸ್.ಗವಿಮಠ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಸರಜೂ ಕಾಟ್ಕರ್ ನೇತೃತ್ವದ ಸಮಿತಿಯು ಗವಿಮಠ ಅವರನ್ನು ಆಯ್ಕೆ ಮಾಡಿತು. ಪ್ರಶಸ್ತಿ ₹1 ಲಕ್ಷ ನಗದು ಒಳಗೊಂಡಿದೆ.

50 ವರ್ಷಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿರುವ ಅವರು, 50ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ಇತಿಹಾಸ, ಜೀವನ ಚರಿತ್ರೆ, ಸಂಶೋಧನೆ ಅವರ ನೆಚ್ಚಿನ ಕ್ಷೇತ್ರಗಳು. 36 ವರ್ಷ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಅವರು, ಗಡಿ ಕನ್ನಡಿಗರ ಧ್ವನಿಯಾಗಿ ಕೆಲಸ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT