ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಡೋಣಿಗೆ ‘ದೃಶ್ಯ ಬೆಳಕು ಗೌರವ ಪುರಸ್ಕಾರ’

Published 27 ಫೆಬ್ರುವರಿ 2024, 4:21 IST
Last Updated 27 ಫೆಬ್ರುವರಿ 2024, 4:21 IST
ಅಕ್ಷರ ಗಾತ್ರ

ಚಿಕ್ಕೋಡಿ: ಕಲಬುರಗಿಯ ದೃಶ್ಯ ಬೆಳಕು ಸಾಂಸ್ಕೃತಿಕ ಸಂಸ್ಥೆ ನೀಡುವ 2023–24ನೇ ಸಾಲಿನ ‘ದೃಶ್ಯ ಬೆಳಕು ಗೌರವ ಪುರಸ್ಕಾರ’ಕ್ಕೆ ಕಲಾವಿದ ಬಾಬುರಾವ್‌ ನಡೋಣಿ ಆಯ್ಕೆಯಾಗಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ದೃಶ್ಯಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡ ರಾಯಬಾಗದ ನಿವಾಸಿ ಬಾಬುರಾವ್ ನಡೋಣಿ ಅವರು 25ಕ್ಕೂ ಹೆಚ್ಚು ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನ ನಡೆಸಿದ್ದಾರೆ. ಬೆಂಗಳೂರು, ದೆಹಲಿ, ಕೇರಳ, ಮುಂಬೈ, ಪುಣೆ, ಗೋವಾ, ಅಂಡಮಾನ್– ನಿಕೋಬಾರ್, ಹೈದರಾಬಾದ್, ಯೂರೋಪದಲ್ಲಿಯೂ ಅವರ ಚಿತ್ರಗಳು ಪ್ರದರ್ಶನ ಕಂಡಿವೆ.  40 ಸಮೂಹ ಕಲಾ ಪ್ರದರ್ಶನಗಳನ್ನು ದೇಶ– ವಿದೇಶಗಳಲ್ಲಿ ಏರ್ಪಡಿಸಿದ್ದಾರೆ. ವಿವಿಧ ವಿಶ್ವ ವಿದ್ಯಾಲಯಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.

ಮಾರ್ಚ್ 3ರಂದು ಕಲಬುರಗಿಯ ರಂಗಾಯಣದಲ್ಲಿ ದೃಶ್ಯ ಬೆಳಕು ಸಾಂಸ್ಕೃತಿಕ ಸಂಸ್ಥೆಯ 10ನೇ ವಾರ್ಷಿಕ ಕಲಾ ಪ್ರದರ್ಶನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT