ಬೆಳಗಾವಿ: ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿದ ಕಾರಣಕ್ಕೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ವಿಪತ್ತು ನಿರ್ವಹಣಾ ಸಮಾಲೋಚಕ ನಿಂಗನಗೌಡ ಚನಬಸನಗೌಡರ ಅವರಿಗೆ ‘ಅತ್ಯುತ್ತಮ ಕಂದಾಯ ಅಧಿಕಾರಿ–2024’ ಪ್ರಶಸ್ತಿ ಲಭಿಸಿದೆ.
ಕಂದಾಯ ಇಲಾಖೆಯ ಸಚಿವ ಕೃಷ್ಣ ಬೈರೇಗೌಡ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಜರುಗಿದ ಸಮಾರಂಭದಲ್ಲಿ ನಿಂಗನಗೌಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಸೇರಿದಂತೆ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.