ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂಬಾಕು ಸೇವನೆಯಿಂದ ಹಲವು ದುಷ್ಪರಿಣಾಮ: ಡಾ.ಬಿ.ಎನ್. ತುಕ್ಕಾರ

Last Updated 7 ಜನವರಿ 2020, 10:43 IST
ಅಕ್ಷರ ಗಾತ್ರ

ಬೆಳಗಾವಿ: ‘ತಂಬಾಕು ಸೇವನೆಯಿಂದಾಗುವ ಮನುಷ್ಯನ ಆರೋಗ್ಯದ ಮೇಲೆ ಹಲವು ದುಷ್ಪರಿಣಾಮಗಳು ಉಂಟಾಗುತ್ತವೆ’ ಎಂದು ಜಿಲ್ಲಾ ಸಮೀಕ್ಷಣಾಧಿಕಾರಿ ಹಾಗೂ ತಂಬಾಕು ನಿಯಂತ್ರಣಾಧಿಕಾರಿ ಡಾ.ಬಿ.ಎನ್. ತುಕ್ಕಾರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಬೆಳಗಾವಿ ಹೋಟೆಲ್ ಮಾಲೀಕರ ಸಂಘದ ಸದಸ್ಯರಿಗೆ ಈಚೆಗೆ ಆಯೋಜಿಸಿದ್ದ ಕೋಟ್ಪಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಯುವಜನರಲ್ಲಿ ತಂಬಾಕು ಸೇವನೆ ಹೆಚ್ಚಾಗುತ್ತಿದೆ. ಬಾಯಿ ಕ್ಯಾನ್ಸರ್‌ ಮತ್ತು ಶ್ವಾಸಕೋಶದ ರೋಗಗಳು ಹೆಚ್ಚಾಗುತ್ತಿವೆ. ಆರೋಗ್ಯದ ಮೇಲೆ ತಂಬಾಕು ಪರಿಣಾಮ ಬೀರುತ್ತಿರುವುದರಿಂದ, ದೇಶದ ಆರ್ಥಿಕ ಪ್ರಗತಿ ಕುಂಠಿತವಾಗುತ್ತದೆ. ಹೀಗಾಗಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಈ ಕಾನೂನು ಉಲ್ಲಂಘಿಸಿದ ವ್ಯಕ್ತಿಗೆ ₹ 200 ದಂಡ ವಿಧಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಹೋಟೆಲ್‌ ಮಾಲೀಕರ ಸಂಘದ ವಿಜಯ ಸಾಲಿಯಾನ ಮಾತನಾಡಿ, ‘ಕೋಟ್ಪಾ ಕಾಯ್ದೆಯ ಪರಿನಾಮಕಾರಿ ಅನುಷ್ಠಾನಕ್ಕೆ ಹೋಟೆಲ್‌ಗಳವರು ಮುಂದಾಗಬೇಕು. ಪರವಾನಗಿ ನವೀಕರಣ ಸಂದರ್ಭದಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು’ ಎಂದು ತಿಳಿಸಿದರು.

ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಸಿಂದ್ದಿಹಟ್ಟಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಡಾ.ಶ್ವೇತಾ ಪಾಟೀಲ, ಕವಿತಾ ರಾಜನ್ನವರ, ಪ್ರಾಣೇಶ ನಾಗ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT