ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯರಗಟ್ಟಿ: ಡಿ.23ರಂದು ಅಯ್ಯಪ್ಪಸ್ವಾಮಿ ಮಹಾಪೂಜೆ

Published 22 ಡಿಸೆಂಬರ್ 2023, 12:52 IST
Last Updated 22 ಡಿಸೆಂಬರ್ 2023, 12:52 IST
ಅಕ್ಷರ ಗಾತ್ರ

ಯರಗಟ್ಟಿ: ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಓಂ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ 10ನೇ ವರ್ಷದ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಡಿ.23ರಂದು ನಡೆಯಲಿದೆ ಎಂದು ಸನ್ನಿಧಾನದ ಈರಣ್ಣಾ ಗುರುಸ್ವಾಮಿ ತಿಳಿಸಿದ್ದಾರೆ.

ಸಂಜೆ 4.30ಕ್ಕೆ ಪಟ್ಟಣದಲ್ಲಿ ವಾದ್ಯ ಮೇಳ ಮತ್ತು ಅಯ್ಯಪ್ಪ ಸ್ವಾಮಿಯ ಮಾಲಾಧಾರಿಗಳಿಂದ ಭವ್ಯ ಜ್ಯೋತಿ ಮೆರವಣಿಗೆ ನಡೆಯಲಿದೆ. 6 ಗಂಟೆಯಿಂದ ವಿವಿಧ ಸನ್ನಿಧಾನದ ಗುರುಸ್ವಾಮಿಗಳಿಂದ ಶ್ರೀ ಅಯ್ಯಪ್ಪ ಸ್ವಾಮಿ, ಶ್ರೀ ಗಣಪತಿ ಹಾಗೂ ಷಣ್ಮುಖ ದೇವರ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.

18 ವರ್ಷಗಳಿಂದ ನಿರಂತರ ಶಬರಿಮಲೆ ಯಾತ್ರೆ ಕೈಗೊಳ್ಳುತ್ತಿರುವ ಗುರುಸ್ವಾಮಿಗಳಿಗೆ ಸನ್ಮಾನ ಜರುಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT