ಚಿಕ್ಕೋಡಿ (ಬೆಳಗಾವಿ ಜಿಲ್ಲೆ):'ಕಾಂಗ್ರೆಸ್ನವರದ್ದು ಹೆಣ ಇಟ್ಟುಕೊಂಡು ರಾಜಕೀಯ ಮಾಡುವ ಸಂಸ್ಕೃತಿ' ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆರೋಪಿಸಿದರು.

ಇಲ್ಲಿ ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಸಚಿವ ಕೆ.ಎಸ್. ಈಶ್ವರಪ್ಪ ಅವರು ಪಕ್ಷ ಸಂಘಟನೆಯ ಪ್ರಮುಖರು. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರು ತಗೆದುಕೊಳ್ಳುವ ನಿರ್ಧಾರದ ಬಗ್ಗೆ ಮಾತನಾಡಲು ನಾವು ಚಿಕ್ಕವರು ಎಂದರು.

ಗುತ್ತಿಗೆದಾರ ಸಂತೋಷ್ ಪಾಟೀಲ ಸಾವಿನ ಕುರಿತು ಪ್ರಾಮಾಣಿಕ ತನಿಖೆ ಮಾಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆನ್ನೆಯೇ ಹೇಳಿದ್ದಾರೆ. ದುರಾದೃಷ್ಟ ಎಂದರೆ ಕಾಂಗ್ರೆಸ್ನವರು ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಕೊಲೆ, ಹಿಜಾಬ್ ವಿಷಯದಲ್ಲೂ ರಾಜಕೀಯ ಮಾಡಿದ್ದರು. ಮತ ಬ್ಯಾಂಕ್ ರಾಜಕೀಯವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.