ಸೋಮವಾರ, ಆಗಸ್ಟ್ 15, 2022
22 °C

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಮುಂದುವರಿಯಲಿ: ಸತೀಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಥಣಿ (ಬೆಳಗಾವಿ ಜಿಲ್ಲೆ): ‘ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದು ಬಯಸುತ್ತೇನೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿನ ತಾಲ್ಲೂಕು ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇನ್ನೂ ಮುಖ್ಯಮಂತ್ರಿ ಬದಲಾವಣೆ ಆಗಿಲ್ಲ. ಆದಾಗ ನೋಡೋಣ’ ಎಂದರು.

‘ಕೋವಿಡ್–19ನಿಂದ ಮೃತರಾದವರ ನಿಖರ ಮಾಹಿತಿಯನ್ನು ಸರ್ಕಾರ ಬಹಿರಂಗಪಡಿಸುತ್ತಿಲ್ಲ. 1,500 ಮಂದಿ ಸಾವಿಗೀಡಾದರೆ 500 ಜನರ ಅಂಕಿ–ಅಂಶವನ್ನಷ್ಟೆ ಕೊಡುತ್ತಿದೆ’ ಎಂದು ದೂರಿದರು.

‘ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ₹ 1 ಹೆಚ್ಚಳ ಮಾಡಿದರೂ ಬಿಜೆಪಿಯವರು ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರು. ಈಗ ಲೀಟರ್ ಪೆಟ್ರೋಲ್ ಬರೋಬ್ಬರಿ ₹ 100 ತಲುಪಿದೆ. ಇಷ್ಟೊಂದು ಏರಿಕೆಯಾದರೂ ಆ ಪಕ್ಷದವರು ಮಾತನಾಡುತ್ತಿಲ್ಲವೇಕೆ? ವಿರೋಧ ಪಕ್ಷವಾಗಿ ಕಾಂಗ್ರೆಸ್‌ ಹೋರಾಟ ನಡೆಸುತ್ತಿದೆ. ಜನರು ಸ್ವಯಂಪ್ರೇರಿತರಾಗಿ ಭಾಗವಹಿಸಬೇಕು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು