ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೋಮ–ಹವನದಲ್ಲಿ ವಿಜಯೇಂದ್ರ ಭಾಗಿ

Last Updated 8 ಫೆಬ್ರುವರಿ 2022, 12:27 IST
ಅಕ್ಷರ ಗಾತ್ರ

ಬೆಳಗಾವಿ: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಜಿಲ್ಲೆಯ ವಿವಿಧೆಡೆ ಮಂಗಳವಾರ ಮಿಂಚಿನ ಸಂಚಾರ ಕೈಗೊಂಡರು.

ಕುರಿ ಮತ್ತು ಉಣ್ಣೆ ನಿಗಮದ ಅಧ್ಯಕ್ಷ ಶರಣು ತಳ್ಳಿಕೇರಿ ಹಾಗೂ ಹಾಲುಮತ ಸಮಾಜದ ಮುಖಂಡರು ಅವರಿಗೆ ಕಂಬಳಿ ನೀಡಿ ಸತ್ಕರಿಸಿದರು. ಖಾನಾಪುರ ಪಟ್ಟಣದಲ್ಲಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ನಂದಗಡದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರನ್ನು ಗಲ್ಲಿಗೇರಿಸಿದ ಜಾಗ ಹಾಗೂ ಸಮಾಧಿ ಸ್ಥಳಕ್ಕೆ ಭೇಟಿ ನಮನ ಸಲ್ಲಿಸಿದರು.

ಬಳಿಕ ನಗರದ ಬಾಕ್ಸೈಟ್ ರಸ್ತೆಯ ಉಷಾ ಕಾಲೊನಿಯ ಮಹಾಲಕ್ಷ್ಮಿ ದೇವಸ್ಥಾನದಲ್ಲಿ 12ನೇ ಜಾತ್ರಾ ಮಹೋತ್ಸವ ಅಂಗವಾಗಿ ಲೋಕಕಲ್ಯಾಣಾರ್ಥವಾಗಿ ನಡೆದ ಹೋಮ–ಹವನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಹುಕ್ಕೇರಿಯ ಗುರುಶಾಂತೇಶ್ವರ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಾವಿರ ಸಪ್ತಶತಿ ಪಾರಾಯಣ, ಸಹಸ್ರ ಚಂಡಿಕಾಯಾಗದ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವಿಶೇಷ ‍ಪೂಜೆ ಸಲ್ಲಿಸಿದರು.

ಕಾರಂಜಿ ಮಠದ ಗುರುಸಿದ್ಧ ಸ್ವಾಮೀಜಿ, ಯರನಾಳದ ಬ್ರಹ್ಮಾನಂದ ಅಜ್ಜ, ಮುರಗೋಡದ ನೀಲಕಂಠ ಸ್ವಾಮೀಜಿ, ಘಟಪ್ರಭಾದ ಮಲ್ಲಿಕಾರ್ಜುನ ಸ್ವಾಮೀಜಿ, ಬೀದರ್‌ನ ಗುರುದೇವ ಆಶ್ರಮದ ಗಣೇಶಾನಂದ ಸ್ವಾಮೀಜಿ ಮೊದಲಾದವರು ಪಾಲ್ಗೊಂಡಿದ್ದರು.

ಮಹಾಲಕ್ಷ್ಮಿ ದೇವಸ್ಥಾನ ಅಭಿವೃದ್ಧಿ ಸಮಿತಿಯವರು ವಿಜಯೇಂದ್ರ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

ಬಳಿಕ ಅವರು ನೆರೆಯ ಮಹಾರಾಷ್ಟ್ರ ಕೊಲ್ಹಾಪುರದ ಕನ್ಹೇರಿ ಮಠಕ್ಕೆ ಭೇಟಿ ನೀಡಿದರು. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು; ಆಶೀರ್ವಾದ ಪಡೆದರು. ಅಲ್ಲಿನ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಆಶೀರ್ವಾದವನ್ನೂ ಪಡೆದರು. ಮಠದ ಕೃಷಿ ಚಟುವಟಿಕೆಗಳು ಮತ್ತು ಗೋಶಾಲೆಯನ್ನು ವೀಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT