ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೋಷಿತರಿಗೆ ಬೆಳಕಾದ ಜಗಜೀವನ ರಾಮ್: ಹನುಮಂತಪ್ಪ ಸಂಜೀವಣ್ಣವರ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಭಿಮತ
Published 5 ಏಪ್ರಿಲ್ 2024, 14:01 IST
Last Updated 5 ಏಪ್ರಿಲ್ 2024, 14:01 IST
ಅಕ್ಷರ ಗಾತ್ರ

ಬೆಳಗಾವಿ: ‘ದೇಶದಲ್ಲಿ ದೀರ್ಘಕಾಲದಿಂದ ಬೆಳೆದು ಬಂದಿದ್ದ ಮೇಲು-ಕೀಳು, ಜಾತಿ ಪದ್ಧತಿ, ಅಸ್ಪೃಶ್ಯತೆಯನ್ನು ನಿವಾರಿಸಲು ಸಾಮಾಜಿಕ ನೆಲೆಗಟ್ಟಿನಲ್ಲಿ ಹೋರಾಡಿ, ಶೋಷಿತ ಸಮುದಾಯದ ಏಳಿಗೆಗೆ ಶ್ರಮಿಸಿದವರು ಬಾಬು ಜಗಜೀವನ ರಾಮ್. ಸಮಾನತೆಯ ಸಂದೇಶಕ್ಕೆ ಒಂದು ಸ್ಪಷ್ಟ ರೂಪ ಕೊಟ್ಟವರು ಅವರೇ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಹನುಮಂತಪ್ಪ ಸಂಜೀವಣ್ಣವರ ಹೇಳಿದರು.

ಇಲ್ಲಿನ ಸಂಗಮೇಶ್ವರ ನಗರದ ಬಾಬು ಜಗಜೀವನ ರಾಮ್ ಉದ್ಯಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ ಹಾಗೂ ಸಮಾಜಕಲ್ಯಾಣ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಾಬು ಜಗಜೀವನ ರಾಮ್ ಅವರ 117ನೇ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದಕ್ಕೂ ಮುನ್ನ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಅವರು ಜಗಜೀವನ ರಾಮ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸಂವಿಧಾನ ಪೀಠಿಕೆ ಬೋಧಿಸಿದರು.

ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಹಾನಗರ ಪಾಲಿಕೆ ಆಯುಕ್ತ ಪಿ.ಎನ್‌.ಲೋಕೇಶ್, ಸಮಾಜಕಲ್ಯಾಣ ಇಲಾಖೆ ಜಂಟಿನಿರ್ದೇಶಕ ನವೀನ ಶಿಂತ್ರೆ, ಪಾಲಿಕೆ ಉಪ ಆಯುಕ್ತ ಉದಯಕುಮಾರ ತಳವಾರ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ನಾಮದೇವ ಬಿಲ್ಕರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ, ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಅಬ್ದುಲ್ ರಶೀದ್ ಮಿರಜನ್ನವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶಿವಪ್ರಿಯಾ ಕಡೆಚೂರು, ಮುಖಂಡರಾದ ಮಲ್ಲೇಶ ಚೌಗಲಾ, ಯಲ್ಲಪ್ಪ ಹುದಲಿ ಇದ್ದರು.

ಗಮನಸೆಳೆದ ಮೆರವಣಿಗೆ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೆರವಣಿಗೆಗೆ ಗಣ್ಯರು ಚಾಲನೆ ನೀಡಿದರು. ರಾಣಿ ಚನ್ನಮ್ಮನ ವೃತ್ತ, ಡಾ.ಬಿ.ಆರ್‌.ಅಂಬೇಡ್ಕರ್‌ ರಸ್ತೆ, ಸದಾಶಿವ ನಗರ ಮಾರ್ಗವಾಗಿ ಸಂಚರಿಸಿ, ಸಂಗಮೇಶ್ವರ ನಗರದ ಉದ್ಯಾನವನ್ನು ತಲುಪಿತು. ಜಾನಪದ ಕಲಾ ತಂಡಗಳ ಪ್ರದರ್ಶನ ಮನಸೆಳೆಯಿತು.

ಬೆಳಗಾವಿಯಲ್ಲಿ ಜಗಜೀವನ ರಾಮ್‌ ಜಯಂತಿ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಜಾನಪದ ಕಲಾವಿದರ ಪ್ರದರ್ಶನ ಮನಸೆಳೆಯಿತು
ಬೆಳಗಾವಿಯಲ್ಲಿ ಜಗಜೀವನ ರಾಮ್‌ ಜಯಂತಿ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಜಾನಪದ ಕಲಾವಿದರ ಪ್ರದರ್ಶನ ಮನಸೆಳೆಯಿತು

‘ಆದರ್ಶ ಮೈಗೂಡಿಸಿಕೊಳ್ಳೋಣ’

ಜಿಲ್ಲಾ ಪಂಚಾಯಿತಿ ಕಾರ್ಯಾಲಯದಲ್ಲಿ ಶುಕ್ರವಾರ ಬಾಬು ಜಗಜೀವನ ರಾಮ್ ಅವರ ಜನ್ಮ ದಿನಾಚರಣೆ ನಿಮಿತ್ತ ಅವರ ಭಾವಚಿತ್ರಕ್ಕೆ ಸಿಇಒ ರಾಹುಲ್ ಶಿಂಧೆ ಪೂಜೆ ಸಲ್ಲಿಸಿದರು.

‘ಹಸಿರು ಕ್ರಾಂತಿ ಹರಿಕಾರ ರಾಷ್ಟ್ರನಾಯಕ ಭಾರತದ ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಮ್ ಅವರ ಆದರ್ಶ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

ಯೋಜನಾ ನಿರ್ದೇಶಕ ಎಂ.ಕೃಷ್ಣರಾಜ್ ಲೆಕ್ಕಾಧಿಕಾರಿ ಗಂಗಾ ಹಿರೇಮಠ ಅಕ್ಷರದಾಸೋಹ ಕ್ಷೇತ್ರ ಶಿಕ್ಷಣಾಧಿಕಾರಿ ಯಕ್ಕುಂಡಿ ಸಹಾಯಕ ನಿರ್ದೇಶಕಿ ಜಯಶ್ರೀ ನಂದೇನ್ನವರ ಶಾಖಾ ವ್ಯವಸ್ಥಾಪಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT