ಸೋಮವಾರ, ಸೆಪ್ಟೆಂಬರ್ 27, 2021
22 °C

ಸಾವಳಗಿ: ಘಟಪ್ರಭೆಗೆ ಬಾಗಿನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾವಳಗಿ: ಗೋಕಾಕ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಘಟಪ್ರಭಾ ನದಿಗೆ ಮುಖಂಡರು, ಮಹಿಳೆಯರು, ಮಕ್ಕಳು ಮತ್ತು ಹಿರಿಯರು ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.

‘ನಾಡಿನ ಸಮೃದ್ಧಿಗಾಗಿ ಹಿಂದಿನ ಕಾಲದಿಂದಲೂ ಗಂಗಾಮಾತೆಗೆ ಪೂಜೆ ಸಲ್ಲಿಸಲಾಗುತ್ತದೆ. ನಾಡಿನಲ್ಲಿ ಮಳೆ–ಬೆಳೆ ಚೆನ್ನಾಗಿ ಬರಲೆಂದು ಬೇಡಿಕೊಳ್ಳುತ್ತಾರೆ. ಸಮೃದ್ಧಿ ಇರಲೆಂದು ಪ್ರಾರ್ಥಿಸುತ್ತಾರೆ’ ಎಂದು ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹೇಳಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಲಕ್ಷ್ಮಿ ಕರಿಗಾರ, ಪಿಡಿಒ ಎಂ.ಸರಕಾವಸ್, ಮುಖಂಡರಾದ ಶಿವಮೂರ್ತಿ ನಾಯಿಕ, ಭೀಮ ಮಕ್ಕಳಗೇರಿ, ಮಹಾಂತೇಶ  ಜೇಡರ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ, ಸದಸ್ಯರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.