ಬೈಲಹೊಂಗಲ: ತಾಲ್ಲೂಕಿನ ಆನಿಗೋಳ ಗ್ರಾಮದಲ್ಲಿ ಕುಡಿಯುವ ನೀರಿನ ನಳದ ನೀರು ಹಿಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ನಡೆದ ಗಲಾಟೆಯಲ್ಲಿ ಮನೆಗೆ ನುಗ್ಗಿ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿದ ಆರೋಪಿಗಳನ್ನು ಸ್ಥಳೀಯ ಪೊಲೀಸರು ತಕ್ಷಣವೇ ಪತ್ತೆಹಚ್ಚಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆದರೆ ಈ ಪ್ರಕರಣದಲ್ಲಿ ಕೆಲ ಹೋರಾಟಗಾರರು ಆರೋಪಿಗಳ ಪರವಾಗಿ ಧ್ವನಿ ಎತ್ತಿ, ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ತಡವಾಗಿ ಹಾಜರುಪಡಿಸಿದ್ದಾರೆ ಎಂದು ಆರೋಪಿಸಿರುವುದು ಹಲ್ಲೆಗೊಳಗಾದ ಕುಟುಂಬಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ಹೋರಾಟಗಾರರು ಪ್ರಕರಣದ ಆರೋಪಿಗಳ ಕುರಿತು ನಿಜಾಂಶ ತಿಳಿಯದೇ ಪೊಲೀಸರ ವಿರುದ್ಧ ಗೂಬೆ ಕೂರಿಸಿ, ಅವರ ಹಕ್ಕು ಚ್ಯುತಿ ಮಾಡುವ ಪ್ರಯತ್ನ ನಡೆಸಿರುವುದು ಸರಿಯಲ್ಲ.

ಆರೋಪಿಗಳು ಅಮಾನುಷ್ಯವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ. ಅಂತಹವರ ಬಗ್ಗೆ ಮಾತನಾಡದೇ ಪೊಲೀಸರನ್ನೇ ಗುರಿಯಾಗಿಸಿರುವುದು ಬೇಸರ ತಂದಿದೆ ಎಂದು ಕೊಲೆ ಯತ್ನಕ್ಕೆ ಒಳಗಾದ ಕೆಶಪನಟ್ಟಿ ಕುಟುಂಬಸ್ಥರು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಡಿವೈಎಸ್ಪಿ ವೀರಯ್ಯ ಹಿರೇಮಠ ಮಾತನಾಡಿ, 'ಕೊಲೆ ಯತ್ನ ಮಾಡಿದವರು ವಯಸ್ಕರರು, ಚಿಕ್ಕ ಮಗು ಎನ್ನದೆ ಕೈಗೆ ಸಿಕ್ಕವರ ಮೇಲೆ ಹಲ್ಲೆ ಮಾಡಿ ತೀವ್ರ ಗಾಯಗೊಳಿಸಿ ತಲೆ ಮರೆಯಿಸಿಕೊಂಡಿದ್ದರು. ತಕ್ಷಣ ಪತ್ತೆ ಹಚ್ಚಿ ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ಸಮಗ್ರ ತನಿಖೆ ನಡೆಯುತ್ತಿದ್ದು, ನೊಂದ ಕುಟುಂಬಕ್ಕೆ ಸೂಕ್ತ ನ್ಯಾಯ ಒದಗಿಸಲಾಗುವುದು' ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-21-185651282

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.