ಬೈಲಹೊಂಗಲ: ‘ಬಸವಣ್ಣನವರ ತತ್ವಗಳು ಹಾಗೂ ಸೌಹಾರ್ದ ಸಹಕಾರದ ಆದರ್ಶಗಳನ್ನು ಅಳವಡಿಸಿಕೊಂಡು ಸದಸ್ಯರ, ಸಮಾಜದ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿರುವ ನಗರದ ಬಸವ ಸೌಹಾರ್ದ ಕ್ರೆಡಿಟ್ ಸಹಕಾರ ಸಂಘವು ಅಲ್ಪಾವಧಿಯಲ್ಲಿ ಗಣನೀಯ ಪ್ರಗತಿ ಸಾಧಿಸಿ ಇತರ ಸಹಕಾರ ಸಂಸ್ಥೆಗಳಿಗೆ ಮಾದರಿಯಾಗಿರುವುದು ಹರ್ಷ ತಂದಿದೆ’ ಎಂದು ಮುರಗೋಡ ಮಹಾಂತ ದುರದುಂಡೇಶ್ವರ ಮಠದ ನೀಲಕಂಠ ಸ್ವಾಮೀಜಿ ಹೇಳಿದರು.

ನಗರದಲ್ಲಿ ಬಸವ ಸೌಹಾರ್ದ ಕ್ರೆಡಿಟ್ ಸಹಕಾರ ಸಂಘ ಸ್ಥಳಾಂತರಗೊಂಡ ನೂತನ ಕಚೇರಿಯ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದರು.

‘ಸಹಕಾರಿ ತತ್ವಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಸದಸ್ಯರೊಂದಿಗೆ ಸೌಹಾರ್ದತೆಯಿಂದ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲೇ ಉನ್ನತ ಮಟ್ಟದ ಸಹಕಾರಿಯಾಗಿ ಬೆಳೆಯಲಿ’ ಎಂದು ಆಶಿಸಿದರು.

ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮಾತನಾಡಿ, ‘ಸದಸ್ಯರ ಅಭಿವೃದ್ಧಿಗೆ ಅನುಕೂಲವಾಗುವ ಹಲವಾರು ಯೋಜನೆಗಳನ್ನು ಸಹಕಾರಿ ಜಾರಿಗೊಳಿಸುತ್ತಿರುವುದು ಶ್ಲಾಘನೀಯ. ಸದಸ್ಯರು ಸಹ ಸಂಸ್ಥೆಯೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿ ಆದರೆ ಪ್ರಗತಿಗೆ ಕೈಜೋಡಿಸಬೇಕು’ ಎಂದರು.

ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಸಂಸ್ಥಾಪಕ ವಿಜಯ ಮೆಟಗುಡ್ಡ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿರ್ದೇಶಕ ಜಗದೀಶ ಕವಟಗಿಮಠ, ಸಂಸ್ಥಾಪಕ ವಿಜಯ ಶ್ರೀಶೈಲ ಮೆಟಗುಡ್ಡ ಮಾತನಾಡಿದರು.

ಸಹಕಾರಿ ಅಧ್ಯಕ್ಷ ಶಿವಾನಂದ ಬಡ್ಡಿಮನಿ ಅಧ್ಯಕ್ಷತೆ ವಹಿಸಿದ್ದರು. ಬಸವರಾಜ ಹೊಂಗಲ, ಡಾ.ಬಸವರಾಜ ಮಹಾಂತಶೆಟ್ಟಿ, ಡಾ.ಎ.ಎನ್. ಬಾಳಿ, ವಿಶ್ವನಾಥ ಹಿರೇಮಠ, ಮಹಾಂತೇಶ ವಾಲಿ, ಬಸವರಾಜ ಸಾಲಿಮಠ, ಸತೀಶ ಮೆಟಗುಡ್ಡ, ಅಶೋಕ ಶೆಟ್ಟರ ಸೇರಿದಂತೆ ಹಲವರು ಇದ್ದರು.

ಮುಖ್ಯ ಕಾರ್ಯನಿರ್ವಾಹಕ ಬಸವರಾಜ ನಂಜನ್ನವರ ಸ್ವಾಗತಿಸಿದರು. ಉದಯ ಹುಲಕುಂದ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-21-1140217862

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.