ಬೈಲಹೊಂಗಲ: ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದವರು ಮಂಗಳವಾರ ರಸ್ತೆ ತಡೆದು ಕಾಂಗ್ರೆಸ್ ಮೈತ್ರಿ ಪಕ್ಷಗಳ ವಿರುದ್ಧ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದರು.

‘ದೇಶದ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶ ಹೊಂದಿರುವ ಕೇಂದ್ರ ಸರ್ಕಾರದ ‘ನಾರಿ ಶಕ್ತಿ ವಂದನಾ ಅಧಿನಿಯಮ’ ಜಾರಿಗೆ ಕಾಂಗ್ರೆಸ್ ಹಾಗೂ ಅದರ ಮೈತ್ರಿ ಪಕ್ಷಗಳು ಅಡ್ಡಿ ಉಂಟು ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಪಂಚಾಯತ್ ರಾಜ್ ಪ್ರಕೋಷ್ಠ ರಾಜ್ಯ ಸಮಿತಿ ಸದಸ್ಯೆ ರತ್ನಾ ಗೋಧಿ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಒದಗಿಸಲು ‘ನಾರಿ ಶಕ್ತಿ ವಂದನಾ ಅಧಿನಿಯಮ’ ಪರಿಚಯಿಸಿತ್ತು. ಆದರೆ ಮಹಿಳೆಯರ ರಾಜಕೀಯ ಸಬಲೀಕರಣ ವಿರೋಧಿ ಮನೋಭಾವ ಹೊಂದಿರುವ ಕಾಂಗ್ರೆಸ್ ಪಕ್ಷ ಈ ಯೋಜನೆಗೆ ಅಡ್ಡಿಪಡಿಸುತ್ತಿದೆ. ಕಾಂಗ್ರೆಸ್ ಮೈತ್ರಿ ಪಕ್ಷಗಳ ಈ ನಿಲುವಿನಿಂದ ದೇಶದ ಮಹಿಳೆಯರು ಜಾಗೃತರಾಗಬೇಕು. ಮಹಿಳೆಯರ ಬಗ್ಗೆ ಗೌರವ, ಕಾಳಜಿ ಇಲ್ಲದ ಕಾಂಗ್ರೆಸ್, ಮಹಿಳೆಯರಿಗೆ ಅಗೌರವ ತೋರುತ್ತಿದೆ’ ಎಂದು ಕಿಡಿ ಕಾರಿದರು.

ಮಂಡಲ ಅಧ್ಯಕ್ಷ ಸುಭಾಷ ತುರಮರಿ, ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಎಫ್.ಎಸ್. ಸಿದ್ಧನಗೌಡ್ರ, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ರಾಜು ಕುಡಸೋಮಣ್ಣವರ, ಬಿಜೆಪಿ ಮುಖಂಡರಾದ ಮಡಿವಾಳಪ್ಪ ಹೋಟಿ, ಶ್ರೀಶೈಲ ಯಡಳ್ಳಿ, ರಿತೇಶ ಪಾಟೀಲ, ಆನಂದ ಮೂಗಿ, ಅಶೋಕ ಗುಂಡ್ಲೂರ, ಲಕ್ಕಪ್ಪ ಕಾರಗಿ, ವಿಶಾಲ ಬೋಗೂರ, ಪ್ರವೀಣ ಶಿಂಗಾರಿ, ಸದಾಶಿವ ಪಾಟೀಲ, ಸುವರ್ಣ ರಾಮದುರ್ಗ, ಆಶಾ ಕಸಮಳಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-21-829472394

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.