ಬೈಲಹೊಂಗಲ: ತಾಲ್ಲೂಕು ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ಹೊಸದಾಗಿ ವ್ಯಾಪಾರ ಮಳಿಗೆಗಳನ್ನು ನಿರ್ಮಿಸಲು ಸಾರಿಗೆ ಸಂಸ್ಥೆ ಆಹ್ವಾನಿಸಿರುವ ಟೆಂಡರ್ ಅನ್ನು ತಕ್ಷಣವೇ ರದ್ದುಪಡಿಸಬೇಕೆಂದು ಕರ್ನಾಟಕ ರಾಜ್ಯ ಸಮಗಾರ (ಚಮ್ಮಾರ) ಹರಳಯ್ಯ ಸಂಘದ ತಾಲ್ಲೂಕು ಘಟಕದಿಂದ ತಹಶೀಲ್ದಾರ್ ಹನುಮಂತ ಶಿರಹಟ್ಟಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ತಾಲ್ಲೂಕು ಘಟಕ ಅಧ್ಯಕ್ಷ ಅರ್ಜುನ ರಾಯಭಾಗ, ಉಪಾಧ್ಯಕ್ಷ ಅಶೋಕ ಸವದತ್ತಿ ಮಾತನಾಡಿ, ‘50 ವರ್ಷಗಳಿಂದ ಬಸ್ ನಿಲ್ದಾಣ ಆವರಣದಲ್ಲಿ ಹರಳಯ್ಯ ಸಮಾಜ ಸುಮಾರು 20ಕ್ಕೂ ಹೆಚ್ಚು ಕುಟುಂಬಗಳು ಪುರಸಭೆ ವತಿಯಿಂದ ಒದಗಿಸಲಾದ 5x5 ಅಳತೆಯ ಲಿಡ್ಕರ್ ಕುಟಿರಗಳಲ್ಲಿ ಪಾದರಕ್ಷೆ ತಯಾರಿಕೆ, ರಿಪೇರಿ ವೃತ್ತಿ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದೇವೆ. ಇದೇ ಸ್ಥಳದಲ್ಲಿ ಹೊಸ ಮಳಿಗೆಗಳನ್ನು ನಿರ್ಮಿಸಿದರೆ ವ್ಯಾಪಾರಕ್ಕೆ ತೀವ್ರ ತೊಂದರೆ ಉಂಟಾಗಿ ಹಲವಾರು ಬಡ ಕುಟುಂಬಗಳು ಜೀವನೋಪಾಯ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಈ ಹಿಂದೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ನಾಲ್ಕು ಬಾರಿ ಟೆಂಡರ್ ಕರೆಯಲಾಗಿದ್ದು, ಅವುಗಳನ್ನು ರದ್ದುಪಡಿಸಲಾಗಿದ್ದರೂ ಮತ್ತೆ ಟೆಂಡರ್ ಪ್ರಕ್ರಿಯೆ ಆರಂಭಿಸಿರುವುದು ನ್ಯಾಯ ಸಮ್ಮತವಲ್ಲ. ಮಳಿಗೆ ನಿರ್ಮಾಣ ಟೆಂಡರ್ ಪ್ರಕ್ರಿಯೆ ರದ್ದುಪಡಿಸಿ ವ್ಯಾಪಾರ ನಡೆಸುತ್ತಿರುವ ಕುಟುಂಬಗಳ ಹಿತಾಸಕ್ತಿ ಕಾಪಾಡಬೇಕು ಎಂದು ಒತ್ತಾಯಿಸಿದರು.

ಸಂಘದ ಗೌರವಾಧ್ಯಕ್ಷ ಸುರೇಶ ಕಟ್ಟಿಮನಿ, ಕಾರ್ಯದರ್ಶಿ ಬಸವರಾಜ ಕಿತ್ತೂರು, ಮೋಹನ ಮುರಗೋಡ, ಸುಭಾಸ ಕಟ್ಟಿಮನಿ, ಬಸವರಾಜ ಕಟ್ಟಿಮನಿ, ಗುರುಪಾದ ಕಟ್ಟಿಮನಿ, ಪರುಶುರಾಮ ಯಲ್ಲಪ್ಪ ರಾಯಭಾಗ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-21-476254083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.