ಬೈಲಹೊಂಗಲ: ‘ಜನಗಣತಿ ಕಾರ್ಯ ರಾಷ್ಟ್ರದ ಅಭಿವೃದ್ಧಿಗೆ ಆಧಾರವಾಗಿದ್ದು, ಪ್ರತಿಯೊಬ್ಬ ಗಣತಿದಾರರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮತ್ತು ಜವಾಬ್ದಾರಿಯಿಂದ ನೆರವೇರಿಸಬೇಕು’ ಎಂದು ತಹಶೀಲ್ದಾರ್ ಹನುಮಂತ ಶಿರಹಟ್ಟಿ ಹೇಳಿದರು.

ನಗರದ ಗಣಾಚಾರಿ ಶಿಕ್ಷಣ ಸಂಸ್ಥೆಯಲ್ಲಿ ಜನಗಣತಿ 2027ರ ಅಂಗವಾಗಿ ಆಯೋಜಿಸಲಾದ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ಮೂರು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ಗಣತಿದಾರರು ತಮ್ಮ ಬ್ಲಾಕ್ ಪ್ರದೇಶಗಳಲ್ಲಿ ಏ.15ರವರೆಗೆ ಸಂಚರಿಸಿ ಮಾಹಿತಿ ಸಂಗ್ರಹಿಸಿಕೊಳ್ಳಬೇಕು, ಜಾಗೃತಿ ಮೂಡಿಸಿ ಹೆಚ್ಚಿನ ಪ್ರಮಾಣದಲ್ಲಿ ಸ್ವಯಂ-ಗಣತಿ ನಡೆಯುವಂತೆ ಪ್ರೋತ್ಸಾಹಿಸಬೇಕು’ ಎಂದರು.

‘ಏ.16ರಿಂದ ಮೇ 15ರವರೆಗೆ ಜನವಸತಿ ಕಟ್ಟಡಗಳ ಸ್ಥಿತಿ, ಸೌಲಭ್ಯಗಳು ಹಾಗೂ ಸ್ವತ್ತುಗಳ ಕುರಿತು ವಿವರವಾದ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ತಿಳಿಸಿದರು.

ನಗರಸಭೆ ಪೌರಾಯುಕ್ತೆ ಭಾಗ್ಯಶ್ರೀ ಹುಗ್ಗಿ ಮಾತನಾಡಿ, ‘ಗಣತಿದಾರರು ಮನೆಮನೆಗೆ ತೆರಳಿ ಸರಿಯಾದ ಹಾಗೂ ನಿಖರ ಮಾಹಿತಿ ಸಂಗ್ರಹಿಸುವ ಮೂಲಕ ಜನಗಣತಿಯ ಯಶಸ್ಸಿಗೆ ಕೈಜೋಡಿಸಬೇಕು. ಸಾರ್ವಜನಿಕರೊಂದಿಗೆ ಉತ್ತಮ ಸಂವಹನ ಬೆಳೆಸಿ, ಅವರಿಗೆ ಸ್ವಯಂ-ಗಣತಿ ಕುರಿತು ಸ್ಪಷ್ಟ ಮಾಹಿತಿ ನೀಡಿ ಸಹಕಾರ ಪಡೆಯುವುದು ಅಗತ್ಯವಾಗಿದೆ’ ಎಂದು ಹೇಳಿದರು.

ಫೀಲ್ಡ್ ಟ್ರೇನರಗಳಾದ ರಾಜು ಹಕ್ಕಿ, ಮಾಲತೇಶ ಜಕಲಿ ತರಬೇತಿ ನೀಡಿದರು. ಕಚೇರಿ ವ್ಯವಸ್ಥಾಪಕ ಎಂ.ಐ.ಕುಟ್ರಿ, ಸಿಬ್ಬಂದಿಗಳಾದ ಬಿ.ಐ. ಗುಡಿಮನಿ, ಬಿ.ಎನ್.ಪಾಟೀಲ, ಬಿ.ಎ.ಖಾನಪ್ಪನವರ ಎಸ್.ಎನ್.ಪಾಟೀಲ, ಎಸ್.ಎಸ್. ನರಗುಂದ,ಆರ್.ಎಸ್. ಹಿಟ್ಟಣಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-21-2043126181

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.