ಬೈಲಹೊಂಗಲ: ‘ಪಟ್ಟಣದ ಸಹಕಾರ ಸಂಸ್ಥೆಯಲ್ಲಿ ಇಟ್ಟಿರುವ ₹1.50 ಲಕ್ಷ ಠೇವಣಿಯನ್ನು ಅವಧಿ ಪೂರ್ಣಗೊಂಡರೂ ಮರಳಿ ನೀಡುತ್ತಿಲ್ಲ’ ಎಂದು ಕಿಲ್ಲೇದಾರ ಗಲ್ಲಿಯ ನಿವಾಸಿ ಇಮ್ತಿಯಾಜ್ ಸುತಗಟ್ಟಿ ಹಾಗೂ ಕುಟುಂಬದವರು ದೂರಿದ್ದಾರೆ.

ಇಮ್ತಿಯಾಜ್ ದೃಷ್ಟಿಹೀನರಾಗಿದ್ದು, ಮನೆಯ ಮುಂಭಾಗದಲ್ಲಿ ಸಣ್ಣ ಡಬ್ಬಿ ಇಟ್ಟುಕೊಂಡು ಉಪಜೀವನ ನಡೆಸುತ್ತಿದ್ದಾರೆ. ಇವರ ಕುಟುಂಬದಲ್ಲಿ ಅಂಗವಿಕಲ ತಾಯಿ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ತಂಗಿ, ಪತ್ನಿ, ಮೂರು ಪುತ್ರಿಯರು, ಒಬ್ಬ ಪುತ್ರ ಇದ್ದು, ಈ ಅಲ್ಪ ಆದಾಯದಿಂದಲೇ ಜೀವನ ಸಾಗುತ್ತಿದ್ದಾರೆ. ವಾಸಿಸುತ್ತಿರುವ ಮನೆ ಅತ್ಯಂತ ಹಳೆಯದು ಮತ್ತು ಶಿಥಿಲಾವಸ್ಥೆಯಲ್ಲಿದ್ದು, ಯಾವ ಕ್ಷಣದಲ್ಲಾದರೂ ಕುಸಿಯುವ ಭೀತಿ ಎದುರಾಗಿದೆ.

‘ಮಳೆಗಾಲದಲ್ಲಿ ಚರಂಡಿ ನೀರು ಮನೆಗೆ ನುಗ್ಗಿ ದೊಡ್ಡ ಸಮಸ್ಯೆ ಉಂಟು ಮಾಡುತ್ತಿದ್ದು, ರಾತ್ರಿ ನಿದ್ದೆ ಮಾಡದೆ ಭಯದಲ್ಲೇ ಕಾಲ ಕಳೆಯುವಂತಾಗಿದೆ ಅವರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಗೆ ಪರಿಹಾರ ಕೋರಿ ನಗರಸಭೆಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಶಾಶ್ವತ ಪರಿಹಾರ ದೊರಕಿಲ್ಲ’ ಎಂದು ಆರೋಪಿಸಿದ್ದಾರೆ.

‘ಮನೆ ನಿರ್ಮಾಣಕ್ಕಾಗಿ ಸೊಸೈಟಿಯಲ್ಲಿ ಠೇವಣಿ ಇಟ್ಟಿದ್ದ ಹಣವನ್ನು ಮರಳಿ ಪಡೆಯಲು ಹಲವು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನೆ ದೊರಕಿಲ್ಲ. ಠೇವಣಿ ಹಣ ವಾಪಸ್ಸು ನೀಡುವಂತೆ ನ್ಯಾಯಾಲಯ ಆದೇಶ ಹೊರಡಿಸಿದರೂ, ಸಂಸ್ಥೆಯವರು ನಿರ್ಲಕ್ಷ್ಯ ತೋರಿಸುತ್ತಿದ್ದಾರೆ’ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಉಪವಿಭಾಗಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿಗೆ ಕುಳಿತುಕೊಳ್ಳಲು ನಿರ್ಧರಿಸಿದ್ದೇವೆ. ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕೂ’ ಎಂದೂ ಆಗ್ರಹಿಸಿದ್ದಾರೆ.

ಸಮಾಜ ಸೇವಕ ರಫೀಕ ಬಡೇಘರ, ಕಿತ್ತೂರು ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಕೋಲಕಾರ, ಪುಣ್ಯ ಕೋಟಿ ಸಂಘದ ಮಂಜು ಮರೆಶೆಟ್ಟಿ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಕುಟುಂಬದ ಬೆಂಬಲಕ್ಕೆ ನಿಂತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-21-1375832213

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.