ಬೈಲಹೊಂಗಲ: 'ಮೂರುಸಾವಿರಮಠದ ಸಭಾ ಭವನದಲ್ಲಿ ಏ.19 ರಂದು ಬೆಳಗ್ಗೆ 8 ರಿಂದ 11 ರವರೆಗೆ ಆರ್ಟ್ ಆಫ್ ಲಿವಿಂಗ್ ಬೆಳಗಾವಿ ವತಿಯಿಂದ ಮೂಲ ಜ್ಯೋತಿರ್ಲಿಂಗ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಈ ಭಾಗದ ಎಲ್ಲ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಜ್ಯೋತಿರ್ಲಿಂಗ ದರ್ಶನ ಪಡೆಯಬೇಕು' ಎಂದು ಮೂರುಸಾವಿರಮಠದ ಪೀಠಾಧಿಪತಿ ಪ್ರಭುನೀಲಕಂಠ ಸ್ವಾಮೀಜಿ ಹೇಳಿದರು.

ನಗರದ ಮೂರುಸಾವಿರಮಠದಲ್ಲಿ ಜ್ಯೋತಿರ್ಲಿಂಗ ದರ್ಶನ ಹಾಗೂ ಬಸವ ಜಯಂತಿ ಆಚರಣೆ ಕಾರ್ಯಕ್ರಮ ಪೂರ್ವಭಾವಿ ಸಭೆ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

'ಏ.20 ರಂದು ಶ್ರೀಮಠದಿಂದ ಜಾತ್ಯಾತೀತವಾಗಿ, ಪಕ್ಷಾತೀತವಾಗಿ ವಿಶ್ವಗುರು ಬಸವೇಶ್ವರ ಜಯಂತಿ ಆಚರಣೆ ನಡೆಯಲಿದೆ. ಅಂದು ಬೆಳಗ್ಗೆ 8 ಕ್ಕೆ ಷಟಸ್ಥಲ ಧ್ವಜಾರೋಹಣ, ತೊಟ್ಟಿಲೋತ್ಸವ, ಮಿನಿ ವಿಧಾನ ಸೌಧದ ಪಕ್ಕದ ಬಸವೇಶ್ವರ ಉದ್ಯಾನವನದ ಬಸವೇಶ್ವರ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಲಾಗುವುದು. ಸಂಜೆ 4 ಕ್ಕೆ ಪೂರ್ಣಕುಂಭಮೇಳದೊಂದಿಗೆ ಜೋಡೆತ್ತಿನ ಭವ್ಯ ಮೆರವಣಿಗೆ ನಡೆಸಲಾಗುವುದು. ಮನೆ, ಮನೆ ಎದುರು ರಂಗೋಲಿ ಬಿಡಿಸಿ ಮೆರವಣಿಗೆ ಸ್ವಾಗತಿಸಬೇಕು. ಬಸವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಎಲ್ಲರೂ ಯಶಸ್ವಿಗೊಳಿಸಬೇಕು' ಎಂದರು.

ಹರ್ಷಾ ಮೆಟಗುಡ್ಡ ಜ್ಯೋತಿರ್ಲಿಂಗ ಆಗಮಿಸುವ ಕುರಿತು ಮಾಹಿತಿ ನೀಡಿದರು. ಮುಖಂಡರಾದ ಶಿವರಂಜನ ಬೋಳನ್ನವರ, ಡಾ.ಎ.ಎನ್.ಬಾಳಿ, ಬಸವರಾಜ ಶಿರವಂತಿ ಮಾತನಾಡಿದರು.

ವಿಶ್ವಹಿಂದೂ ಪರಿಷತ್ ಜಿಲ್ಲಾ ಘಟಕ ಅಧ್ಯಕ್ಷ ಪ್ರಮೋದಕುಮಾರ ವಕ್ಕುಂದಮಠ, ರಾಯಣ್ಣ ಸಮಿತಿ ಉಪಾಧ್ಯಕ್ಷ ಸೋಮನಾಥ ಸೊಪ್ಪಿಮಠ, ಕಾಂಗ್ರೆಸ್ ಬ್ಲಾಕ್ ಘಟಕ ಅಧ್ಯಕ್ಷ ಮಹಾಂತೇಶ ಕಳ್ಳಿಬಡ್ಡಿ, ವೀರಶೈವ ಲಿಂಗಾಯತ ಮಹಾಸಭಾ ನಿರ್ದೇಶಕ ಗುರು ಮೆಟಗುಡ್ಡ, ಡಾ.ಮಹಾಂತೇಶ ಗದಗ, ಮಹಾಂತೇಶ ಮತ್ತಿಕೊಪ್ಪ, ಶಶಿಧರ ಚಿಕ್ಕೋಡಿ, ಬಸವರಾಜ ಗುರುವನ್ನವರ, ದೊಡಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-21-1901225535

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.