ಬೈಲಹೊಂಗಲ: ‘ವೀರರಾಣಿ ಕಿತ್ತೂರು ಚನ್ನಮ್ಮನ ಪುಣ್ಯ, ಪವಿತ್ರವಾದ ಐಕ್ಯ ಸ್ಥಳ ಕೇವಲ ಸ್ಥಳೀಯ ಐತಿಹಾಸಿಕ ತಾಣವಲ್ಲ, ಅದು ನಾಡಿನ ಸ್ವಾತಂತ್ರ್ಯ ಹೋರಾಟದ ಶೌರ್ಯ ಮತ್ತು ತ್ಯಾಗದ ಸಂಕೇತ. ಇದನ್ನು ತಕ್ಷಣವೇ ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ ಸಮಗ್ರ ಅಭಿವೃದ್ಧಿಗೊಳಿಸಬೇಕು’ ಎಂದು ಕನ್ನಡಪರ ಹಿರಿಯ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದರು.

ಇಲ್ಲಿನ ವೀರರಾಣಿ ಕಿತ್ತೂರು ಚನ್ನಮ್ಮ ಐಕ್ಯ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ಗೌರವ ಸಲ್ಲಿಸಿ ಮಾತನಾಡಿ, ‘ಚನ್ನಮ್ಮ ಸ್ಮಾರಕ ಪ್ರದೇಶ ಅಭಿವೃದ್ಧಿಪಡಿಸುವಲ್ಲಿ ಸರ್ಕಾರ ನಿರ್ಲಕ್ಷ್ಯವಹಿಸುತ್ತಿದೆ. ಚನ್ನಮ್ಮನ ಹೆಸರಿನಲ್ಲಿ ಸೈನಿಕ ಶಾಲೆ ಸ್ಥಾಪಿಸಬೇಕು. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಚಳುವಳಿ ಆರಂಭಿಸಲಾಗುವುದು’ ಎಂದು ಎಚ್ಚರಿಸಿದರು.

ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು ಮಾತನಾಡಿದರು. ಮುಖಂಡರಾದ ಬಾಳನಗೌಡ ಪಾಟೀಲ, ಶಿವು ಶಿರಸಂಗಿ, ಕನ್ನಡ ಸೇನೆಯ ರಾಜ್ಯ ಅಧ್ಯಕ್ಷ ಕೆ.ಆರ್. ಕುಮಾರ, ಕನ್ನಡ ಚಳವಳಿ ಮುಖಂಡ ಗಿರೀಶ ಗೌಡ, ಉತ್ತರ ಕರ್ನಾಟಕ ಅಧ್ಯಕ್ಷ ಚನ್ನಬಸವ ಜೆಕಿನ್, ಕನ್ನಡ ಜಾಗೃತಿ ವೇದಿಕೆ ರಾಜ್ಯ ಅಧ್ಯಕ್ಷ ಮಂಜುನಾಥ ದೇವ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-21-468852107

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.