ಬೈಲಹೊಂಗಲ: ‘ನಗರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪೌರಕಾರ್ಮಿಕರ ಮತ್ತು ಕಸ ಹಾಗೂ ಚಿಂದಿ ಆಯುವ ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಗೆ ಸರ್ಕಾರ ಮೊದಲ ಆದ್ಯತೆ ನೀಡಿದೆ. ದೈನಂದಿನ ಕೆಲಸದ ಸಮಯದಲ್ಲಿ ಸುರಕ್ಷಾ ಕ್ರಮಗಳನ್ನು ಅನುಸರಿಸುವುದರ ಮೂಲಕ ತಮ್ಮ ಆರೋಗ್ಯದ ಬಗ್ಗೆ ಸುರಕ್ಷತೆ ಕಾಪಾಡಿಕೊಳ್ಳಬೇಕು' ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ನಗರಸಭೆಯಲ್ಲಿ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸಾಮಗ್ರಿ ವಿತರಣೆ ಮತ್ತು ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು-2026 ರ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

'ಫಲಾನುಭವಿಗಳು ತ್ರಿಚಕ್ರ ಸೈಕಲ್ ಮತ್ತು ವ್ಹೀಲ್ ಚೇರ್ ಸದ್ಭಳಕೆ ಮಾಡಿಕೊಂಡು ಸ್ವಾವಲಂಬಿ ಬದುಕು ಸಾಗಿಸಬೇಕು' ಎಂದರು.

ನಗರಸಭೆ ಪೌರಾಯುಕ್ತೆ ಭಾಗ್ಯಶ್ರೀ ಹುಗ್ಗಿ ಮಾತನಾಡಿ, ಘನತ್ಯಾಜ್ಯ ವಸ್ತು ನಿರ್ವಹಣೆ ನಿಯಮಗಳು-2026 ಕುರಿತು ಪೌರಕಾರ್ಮಿಕರು ಮತ್ತು ಚಿಂದಿ ಆಯುವವರಿಗೆ ತ್ಯಾಜ್ಯ ಸಂಗ್ರಹಣೆ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮತ್ತು ವೈಯಕ್ತಿಕ ಸುರಕ್ಷತೆ ಬಗ್ಗೆ ತಿಳುವಳಿಕೆ ನೀಡಿದರು.

ನಗರೋತ್ಥಾನ ಯೋಜನೆ ಪೌರಕಾರ್ಮಿಕರಿಗೆ, ನಮಸ್ತೆ ಯೋಜನೆಯಡಿ ಚಿಂದಿ ಆಯುವವರಿಗೆ ಸುರಕ್ಷತಾ ಕಿಟ್ ವಿತರಣೆ ಹಾಗೂ ಶೇ 5ರ ನಿಧಿಯಡಿ ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ಸೈಕಲ್ ಮತ್ತು ವ್ಹೀಲ್ ಚೇರ್ ವಿತರಿಸಲಾಯಿತು.

ಕಚೇರಿ ವ್ಯವಸ್ಥಾಪಕ ಎಂ.ಐ. ಕುಟ್ರಿ, ಕಮ್ಯೂನಿಟಿ ಅಪೇರ್ಸ್ ಆಫೀಸರ್ ಆರ್.ಎಸ್. ಹಿಟ್ಟಣಗಿ, ಬಿ.ಐ. ಗುಡಿಮನಿ, ಹಿರಿಯ ಆರೋಗ್ಯ ನಿರೀಕ್ಷಕ ಎಂ. ಎಂ. ಧಾರವಾಡಕರ, ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-21-441550432

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.