ಬೈಲಹೊಂಗಲ: ನಗರದ ಟಿಪ್ಪುಸುಲ್ತಾನ್ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯಲ್ಲಿ ಠೇವಣಿ ಇಟ್ಟಿದ್ದ ಹಣವನ್ನು ಅವಧಿ ಪೂರ್ಣಗೊಂಡರೂ ಮರಳಿ ನೀಡದಿರುವುದನ್ನು ಖಂಡಿಸಿ ಕುಟುಂಬಸ್ಥರು ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಉಪವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಬುಧವಾರ ಪ್ರತಿಭಟನೆ ನಡೆಸಿದರು.

ಉಪವಿಭಾಗಾಧಿಕಾರಿ ಪ್ರವೀಣ ಜೈನ್ ಅವರು ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಈ ಹಿಂದೆ ಧರಣಿ ಹಿಂಪಡೆಯಲಾಗಿತ್ತು. ಆದರೆ ಭರವಸೆ ಈಡೇರದ ಹಿನ್ನೆಲೆಯಲ್ಲಿ ಹೋರಾಟಗಾರರು ಮತ್ತೆ ಎಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಮಾಜ ಸೇವಕ ರಫೀಕ ಬಡೇಘರ, ಕಿತ್ತೂರು ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಶಿವಾನಂದ ಕೋಲಕಾರ ಮಾತನಾಡಿ, ‘ಒಂಬತ್ತು ದಿನಗಳ ಹಿಂದೆ ಎಸಿ ಕಚೇರಿ ಎದುರು ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿತ್ತು. ಎಸಿ ಪ್ರವೀಣ ಜೈನ್ ಅವರು ಎರಡು ದಿನಗಳಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಎಸಿ ಅವರ ಉಡಾಫೆ ಉತ್ತರದಿಂದ ಹಾಗೂ ಯಾವುದೇ ಕ್ರಮ ಕೈಗೊಳ್ಳದೆ ಇರುವುದಕ್ಕೆ ಹೋರಾಟಗಾರರು ಮತ್ತಷ್ಟು ಆಕ್ರೋಶಗೊಂಡರು.

ಇಮ್ತಿಯಾಜ ಸುತಗಟ್ಟಿ ಅವರ ಮನೆ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದೆ. ಜೀವ ಕೈಯಲ್ಲಿ ಹಿಡಿದು ಬದುಕುತ್ತಿದ್ದಾರೆ. ಇಂತಹ ಪರಿಸ್ಥಿತಿಗೆ ತಕ್ಷಣ ಪರಿಹಾರ ಒದಗಿಸದೆ ಹೋದರೆ ಏನಾದರೂ ಅನಾಹುತವಾದರೆ ಅದಕ್ಕೆ ಯಾರು ಹೊಣೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಜಿಲ್ಲಾ ರೈತ ಮುಖಂಡ ಅಪ್ಪಾಸಾಹೇಬ ಲಕ್ಕುಂಡಿ, ಆನಂದಗೌಡ ಪಾಟೀಲ ಮಾತನಾಡಿ, ಕಿಲ್ಲೇದಾರ ಗಲ್ಲಿಯ ನಿವಾಸಿ ಇಮ್ತಿಯಾಜ ಸುತಗಟ್ಟಿ ನೊಂದ ಕುಟುಂಬದ ದುಸ್ಥಿತಿಯನ್ನು ಹೋರಾಟಗಾರರು ವಿವರಿಸಿದರು. ಕುಟುಂಬದಲ್ಲಿ ಎಂಟು ಮಂದಿ ಸದಸ್ಯರಿದ್ದು, ಅವರಲ್ಲಿ ಒಬ್ಬರು ದೃಷ್ಟಿಹೀನರಾಗಿದ್ದು, ಮತ್ತೊಬ್ಬರು ಅಂಗವೈಕಲ್ಯದಿಂದ ಬಳಲುತ್ತಿದ್ದಾರೆ. ಜೊತೆಗೆ ಮಾನಸಿಕ ಅಸ್ತವ್ಯಸ್ತತೆಯಿಂದ ಬಳಲುತ್ತಿರುವ ಸದಸ್ಯರೂ ಇದ್ದಾರೆ. ಮನೆ ಸಂಪೂರ್ಣ ಕುಸಿಯುವ ಹಂತದಲ್ಲಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಉಪವಿಭಾಗಾಧಿಕಾರಿ ಪ್ರವೀಣ ಜೈನ್ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬಳಿಕ ಸ್ಥಳಕ್ಕೆ ಆಗಮಿಸಿದ ತಹಶಿಲ್ದಾರ ಎಚ್.ಎನ್.ಶಿರಹಟ್ಟಿ, ನಗರಸಭೆ ಪೌರಾಯುಕ್ತೆ ಭಾಗ್ಯಾಶ್ರೀ ಹುಗ್ಗಿ ಅವರು ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿ, ತಕ್ಷಣ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು. ಒಂದು ವೇಳೆ ಸಮಸ್ಯೆ ಬಗ್ಗೆ ಹರಿಯದಿದ್ದರೆ ಅರೆ ಬೆತ್ತಲೆ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.

ಸುಭಾನಿ ನದಾಫ, ಮಾರುತಿ ಕೊಂಡೂರ, ರಫೀಕ ನಾಯಕ, ರಫೀಕ ದೇಶನೂರ, ಪುರಕಾನ ಶಿರಸಂಗಿ, ಸೋಯೇಬ ಸಂಗೊಳ್ಳಿ, ಅಭಿಷೇಕ ಕಲಾಲ, ಗೋಪಿ ಪವಾರ, ಫಾರೂಕ ಸುತಗಟ್ಟಿ, ಸೇರಿದಂತೆ ಹಲವು ಸಂಘಟನೆಗಳ ಪದಾಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-21-548109123

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.