ಬೈಲಹೊಂಗಲ: ತಾಲ್ಲೂಕಿನ ನೂತನ ತಹಶೀಲ್ದಾರರಾಗಿ ಸದಾಶಿವ ಮಕ್ಕೋಜಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಅವರು ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾರ್ವಜನಿಕರು ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು. ಜನಸೇವೆಗೆ ಎಲ್ಲರ ಸಹಕಾರ ಅಗತ್ಯ’ ಎಂದು ಹೇಳಿದರು.

ಇದಕ್ಕೂ ಮೊದಲು ಬೈಲಹೊಂಗಲ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಎಚ್.ಎನ್. ಶಿರಹಟ್ಟಿ ಅವರನ್ನು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-21-404495555

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.