ಶನಿವಾರ, ಜನವರಿ 22, 2022
16 °C

ಕಾಂಗ್ರೆಸ್‌ ಅಭ್ಯರ್ಥಿ ಸೋಲಿಸಿ: ಬಾಲಚಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಕಾಕ: ‘ಇದೇ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಬೇಕು’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಹೊರವಲಯದ ಗೋಕಾಕ ಸಪ್ಲೈಯರ್ಸ್ ಸಭಾಭವನದಲ್ಲಿ ಭಾನುವಾರ ನಡೆದ ಅರಭಾವಿ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಆಯ್ಕೆ ಮಾಡಬೇಕು’ ಎಂದು ಕೋರಿದರು.

‘ಮಹಾಂತೇಶ ಕವಟಗಿಮಠ ಅವರು 3ನೇ ಬಾರಿಗೆ ಸ್ಪರ್ಧಿಸಿದ್ದಾರೆ. ಪಕ್ಷದ ಸಾಧನೆಗಳನ್ನು ಮತದಾರರಿಗೆ ವಿವರಿಸಬೇಕು. ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೈಗಳನ್ನು ಬಲಪಡಿಸಬೇಕು. ಇನ್ನೊಂದು ಮತ ಕಾಂಗ್ರೆಸ್ ವಿರುದ್ಧ ಚಲಾಯಿಸಬೇಕು’ ಎನ್ನುವ ಮೂಲಕ ಪಕ್ಷೇತರ ಅಭ್ಯರ್ಥಿ, ಸಹೋದರ ಲಖನ್ ಜಾರಕಿಹೊಳಿ ಅವರನ್ನು ಬೆಂಬಲಿಸುವಂತೆ ಹೆಸರು ಪ್ರಸ್ತಾಪಿಸದೆ ಕೋರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು