ಬೆಳಗಾವಿ: ‘ಗೋಕಾಕದ ಬಿಜೆಪಿ ಶಾಸಕ,ಹಿರಿಯ ಸಹೋದರ ರಮೇಶ ಜಾರಕಿಹೊಳಿ ವಿಷಯದಲ್ಲಿ ಉಂಟಾಗಿರುವ ಗೊಂದಲಗಳಿಗೆ ಶೀಘ್ರವೇ ತೆರೆ ಎಳೆಯಲಿದ್ದೇವೆ’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಗೋಕಾಕದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದ ಅವರು, ‘ನಾನು ಸಚಿವ ಸ್ಥಾನ ಬೇಡಿಕೆ ಇಟ್ಟಿಲ್ಲ. ಮಾಧ್ಯಮದಲ್ಲಿ ಆ ರೀತಿಯ ಸುದ್ದಿ ಏಕೆ ಬರುತ್ತಿದೆಯೋ ಗೊತ್ತಿಲ್ಲ. ಪಕ್ಷದಿಂದಲೂ ಅಂತಹ ಆಹ್ವಾನ ಬಂದಿಲ್ಲ. ಕೆಎಂಎಫ್ ಅಧ್ಯಕ್ಷನಾಗಿ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿದ್ದೇನೆ’ ಎಂದು ಸ್ಪಷ್ಟಪಡಿಸಿದರು.

‘ರಮೇಶ ಜಾರಕಿಹೊಳಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದಾರೆ. ಅವರು ಜುಲೈ 2ರಂದು ಗೋಕಾಕಕ್ಕೆ ಬರಲಿದ್ದಾರೆ. ನಾವೆಲ್ಲರೂ ಸಭೆ ನಡೆಸಿ ಚರ್ಚಿಸಿದ ಬಳಿಕ ಜಂಟಿ ಪತ್ರಿಕಾಗೋಷ್ಠಿ ನಡೆಸುತ್ತೇವೆ. ಕೆಲವು ವಿಷಯಗಳನ್ನು ಸ್ಪಷ್ಟಪಡಿಸಬೇಕಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.